25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

ಮಡಂತ್ಯಾರು: ಆತ್ಮಶಕ್ತಿ ವಿವಿದ್ಧೋದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಮಡಂತ್ಯಾರು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ) ಮಡವು, ಜೆಸಿಐ ಮಡಂತ್ಯಾರು, ರೋಟರಿ ಕ್ಲಬ್ ಮಡಂತ್ಯಾರು, ಇವರ ಜಂಟಿ ಸಹಯೋಗದೊಂದಿಗೆ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮತ್ತು ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇವರ ವೈದರ ತಂಡದೊಂದಿಗೆ ಉಚಿತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರವನ್ನು ಜ. 13 ರಂದು ಶನಿವಾರ ಬೆಳಗ್ಗೆ ಸಮಯ 9.30ರಿಂದ ಮಧ್ಯಾಹ್ನ 12.30 ರವರೆಗೆ ಆಶೀರ್ವಾದ್ ಹಾಲ್ (ಶ್ರೀ ದುರ್ಗಾ ಕಾಂಪ್ಲೇಕ್ಸ್) ಮಡಂತ್ಯಾರು ಇಲ್ಲಿ ಆಯೋಜಿಸಲಾಗಿದೆ.

ಈ ವೈದ್ಯಕೀಯ ಶಿಬಿರದಲ್ಲಿ ಕ್ಯಾನ್ಸರ್ ತಪಾಸಣೆ, ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಉಚಿತ ಕನ್ನಡಕ ವಿತರಣೆ , ಮಧುಮೇಹ ತಪಾಸಣೆ , ಬಿ. ಪಿ ತಪಾಸಣೆ , ಜನರಲ್ ವೈದ್ಯಕೀಯ ಸಮಾಲೋಚನೆ, ಬಾಯಿ ಮತ್ತು ಹಲ್ಲುಗಳ ಆರೋಗ್ಯ ಶಿಕ್ಷಣ ,ಬಾಯಿ ಮತ್ತು ಹಲ್ಲುಗಳ ಆರೋಗ್ಯ ತಪಾಸಣೆ ,ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ರೋಗಗ್ರಸ್ಥ ಹಲ್ಲುಗಳನ್ನು ಕೀಳುವುದು, ಹಲ್ಲುಗಳನ್ನು ಶುಚಿ ಮಾಡುವುದು. ಉಚಿತ ಔಷಧಿ ವಿತರಣೆ , ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಇತರ ವೈದ್ಯಕೀಯ ಸೌಲಭ್ಯವಿರುವುದು.


ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

Suddi Udaya

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!