32.6 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ: ಧಾರ್ಮಿಕ ಶ್ರದ್ಧಾಕೇಂದ್ರಗಳು ಗ್ರಾಮಗಳ ಪ್ರಮುಖ ಭಾಗವಾಗಿದ್ದು. ಇವುಗಳನ್ನು ಸ್ವಚ್ಛವಾಗಿ ಇಟ್ಟುಕೊಂಡಲ್ಲಿ ಪರಿಸರ ಸ್ವಚ್ಛತಾ ಮನೋಭಾವವು ಸಾರ್ವತ್ರಿಕವಾಗಿರುತ್ತದೆ ಎಂಬ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಚಿಂತನೆಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ಜನ ಸಹಭಾಗಿತ್ವದಲ್ಲಿ ಶ್ರದ್ಧಾಕೇಂದ್ರಗಳ ಬೃಹತ್ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ. ವರ್ಷದಲ್ಲಿ 2 ಬಾರಿ ಅಂದರೆ ದೇಶದ ಸ್ವಾತಂತ್ರ್ಯೋತ್ಸವ ಮತ್ತು ಮಕರ ಸಂಕ್ರಾಂತಿ ಸಂದರ್ಭ ಸಪ್ತಾಹದ ಮೂಲಕ ಸ್ವಯಂ ಸೇವಕರು ಶ್ರದ್ಧಾಕೇಂದ್ರಗಳಾದ ದೇವಸ್ಥಾನ, ಬಸದಿ, ಮಸೀದಿ, ಚರ್ಚ್‌ಗಳ ಸ್ವಚ್ಛತೆಯನ್ನು ಕೈಗೊಳ್ಳಲಾಗಿದೆ.


ಕಳೆದ 8 ವರ್ಷಗಳಿಂದ ನಿರಂತರವಾಗಿ ಸ್ವಸಹಾಯ ಸಂಘಗಳ ಸದಸ್ಯರು ಶ್ರದ್ಧಾಕೇಂದ್ರದ ಸ್ವಚ್ಛತೆಯನ್ನು ಕೈಗೊಳ್ಳುತ್ತಿದ್ದು, ಈ ಬಾರಿ ಮಕರ ಸಂಕ್ರಾತಿ ಅಂದರೆ ಉತ್ತರಾಯಣ ಪುಣ್ಯ ಕಾಲ ಜನವರಿ 14 ರ ಮೊದಲು ರಾಜ್ಯದ ಎಲ್ಲಾ ಶ್ರದ್ಧಾಕೇಂದ್ರಗಳು ಸ್ವಚ್ಛ ಹಾಗೂ ಪಾವಿತ್ರ್ಯತೆಯಿಂದ ಕೂಡಿರಬೇಕೆಂಬ ಉದ್ದೇಶದಿಂದ ಜನವರಿ 7 ರಿಂದ 13 ರವರೆಗೆ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹವನ್ನು ನಡೆಸಲಾಗುತ್ತಿದೆ.

ರಾಜ್ಯದಾದ್ಯಂತ 16,529 ಶ್ರದ್ಧಾಕೇಂದ್ರಗಳನ್ನು ಗುರುತಿಸಲಾಗಿದ್ದು ಸುಮಾರು 4,13,010 ಸ್ವಯಂ ಸೇವಕರು, ದೇವಾಲಯದ ಆಡಳಿತ ಮಂಡಳಿ, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ಸದಸ್ಯರು, ನವಜೀವನ ಸಮಿತಿಯ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣೆಯ ಸದಸ್ಯರು, ಸ್ವಚ್ಛತಾ ಸೇನಾನಿಗಳು, ಊರಿನ ಗಣ್ಯರು, ಗ್ರಾಮಪಂಚಾಯತ್‌ನ ಸದಸ್ಯರು ವಿವಿಧ ಸಂಘ ಸಂಸ್ಥೆಯ ಕಾರ್ಯಕರ್ತರು ಭಾಗವಹಿಸಿ ರಾಜ್ಯಾದಾದ್ಯಂತ ನಡೆಯುವ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ.

Related posts

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya
error: Content is protected !!