September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ: ಧಾರ್ಮಿಕ ಶ್ರದ್ಧಾಕೇಂದ್ರಗಳು ಗ್ರಾಮಗಳ ಪ್ರಮುಖ ಭಾಗವಾಗಿದ್ದು. ಇವುಗಳನ್ನು ಸ್ವಚ್ಛವಾಗಿ ಇಟ್ಟುಕೊಂಡಲ್ಲಿ ಪರಿಸರ ಸ್ವಚ್ಛತಾ ಮನೋಭಾವವು ಸಾರ್ವತ್ರಿಕವಾಗಿರುತ್ತದೆ ಎಂಬ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಚಿಂತನೆಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ಜನ ಸಹಭಾಗಿತ್ವದಲ್ಲಿ ಶ್ರದ್ಧಾಕೇಂದ್ರಗಳ ಬೃಹತ್ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ. ವರ್ಷದಲ್ಲಿ 2 ಬಾರಿ ಅಂದರೆ ದೇಶದ ಸ್ವಾತಂತ್ರ್ಯೋತ್ಸವ ಮತ್ತು ಮಕರ ಸಂಕ್ರಾಂತಿ ಸಂದರ್ಭ ಸಪ್ತಾಹದ ಮೂಲಕ ಸ್ವಯಂ ಸೇವಕರು ಶ್ರದ್ಧಾಕೇಂದ್ರಗಳಾದ ದೇವಸ್ಥಾನ, ಬಸದಿ, ಮಸೀದಿ, ಚರ್ಚ್‌ಗಳ ಸ್ವಚ್ಛತೆಯನ್ನು ಕೈಗೊಳ್ಳಲಾಗಿದೆ.


ಕಳೆದ 8 ವರ್ಷಗಳಿಂದ ನಿರಂತರವಾಗಿ ಸ್ವಸಹಾಯ ಸಂಘಗಳ ಸದಸ್ಯರು ಶ್ರದ್ಧಾಕೇಂದ್ರದ ಸ್ವಚ್ಛತೆಯನ್ನು ಕೈಗೊಳ್ಳುತ್ತಿದ್ದು, ಈ ಬಾರಿ ಮಕರ ಸಂಕ್ರಾತಿ ಅಂದರೆ ಉತ್ತರಾಯಣ ಪುಣ್ಯ ಕಾಲ ಜನವರಿ 14 ರ ಮೊದಲು ರಾಜ್ಯದ ಎಲ್ಲಾ ಶ್ರದ್ಧಾಕೇಂದ್ರಗಳು ಸ್ವಚ್ಛ ಹಾಗೂ ಪಾವಿತ್ರ್ಯತೆಯಿಂದ ಕೂಡಿರಬೇಕೆಂಬ ಉದ್ದೇಶದಿಂದ ಜನವರಿ 7 ರಿಂದ 13 ರವರೆಗೆ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹವನ್ನು ನಡೆಸಲಾಗುತ್ತಿದೆ.

ರಾಜ್ಯದಾದ್ಯಂತ 16,529 ಶ್ರದ್ಧಾಕೇಂದ್ರಗಳನ್ನು ಗುರುತಿಸಲಾಗಿದ್ದು ಸುಮಾರು 4,13,010 ಸ್ವಯಂ ಸೇವಕರು, ದೇವಾಲಯದ ಆಡಳಿತ ಮಂಡಳಿ, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ಸದಸ್ಯರು, ನವಜೀವನ ಸಮಿತಿಯ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣೆಯ ಸದಸ್ಯರು, ಸ್ವಚ್ಛತಾ ಸೇನಾನಿಗಳು, ಊರಿನ ಗಣ್ಯರು, ಗ್ರಾಮಪಂಚಾಯತ್‌ನ ಸದಸ್ಯರು ವಿವಿಧ ಸಂಘ ಸಂಸ್ಥೆಯ ಕಾರ್ಯಕರ್ತರು ಭಾಗವಹಿಸಿ ರಾಜ್ಯಾದಾದ್ಯಂತ ನಡೆಯುವ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ.

Related posts

ನಾಳೆ(ಜೂ.13): ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಉಜಿರೆ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಯಶೋ-ವಿಜಯ ಬದುಕು-ನೆನಪು-ಸ್ಮರಣೆ, ಹಾಗೂ ದಿ. ಕಾಶಿ ಶೆಟ್ಟಿಯವರ ಸ್ಮರಣಾರ್ಥ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

Suddi Udaya

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಬುರುಡೆ ಪ್ರಕರಣ: ಬೆಂಗಳೂರಿನ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

Suddi Udaya
error: Content is protected !!