April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

ಬೆಳ್ತಂಗಡಿ : ಗರ್ಭಿಣಿ ಮಹಿಳೆಯರಿಗೆ ವಿವಿಧ ರೋಗದ ಬಗ್ಗೆ ಆರೋಗ್ಯ ಇಲಾಖೆಯಿಂದ ಆರೋಗ್ಯ ಜಾಗೃತಿ ಕಾರ್ಯಾಗಾರ ಹಾಗೂ ಕಾರ್ಯಕ್ರಮದ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ 40 ಮಂದಿ ಗರ್ಭಿಣಿ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಜ.9 ರಂದು ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಜರುಗಿತು.

ಕರ್ನಾಟಕ ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಮಂಗಳೂರು, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ತಾಯಿಯಿಂದ ಮಗುವಿಗೆ ಹರಡುವ ಹೆಚ್.ಐ.ವಿ, ಸಿಫಿಲಿಸ್ ಮತ್ತು ಹೆಪಟೈಟಿಸ್ ನಿರ್ಮೂಲನೆ ಆಂದೋಲನೆ ಕಾರ್ಯಕ್ರಮದ ಮೂಲಕ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬೆಳ್ತಂಗಡಿ ತಾಲೂಕಿನ ಸುಮಾರು 40 ಗರ್ಭಿಣಿ ತಾಯಂದಿರಿಗೆ ಆರೋಗ್ಯ ಇಲಾಖೆ ವತಿಯಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರಕಾಂತ್ ವಹಿಸಿದ್ದರು. ನೇತ್ರ ತಜ್ಞರಾದ ಡಾ.ರಮೇಶ್, ದಂತ ವೈದ್ಯರಾದ ಡಾ.ಹೇಮಲತಾ, ಸ್ತ್ರೀ ರೋಗ ತಜ್ಞ ಜಾನೀಸ್, ಐಸಿಟಿಸಿ ಆಪ್ತ ಸಮಾಲೋಚಕ ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಧರ್ಮಪಾಲ್ ಭಾಗವಹಿಸಿದರು. ಬೆಳ್ತಂಗಡಿ ಟಿ.ಹೆಚ್.ಓ ಕಚೇರಿಯ ಸಿಬ್ಬಂದಿ ಅಜಯ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!