ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

53 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಬಾಯಿ ಹುಣ್ಣು ಕಾಣಿಸಿಕೊಂಡು ಒಂದು ತಿಂಗಳಿನಿಂದ ಕಷ್ಟಪಡುತ್ತಿದ್ದರು. ಇತ್ತೀಚೆಗೆ ಬಾಯಿ ಹುಣ್ಣುವಿನಿಂದ ರಕ್ತಸ್ರಾವ ಕಂಡು ಬಂದಾಗ ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದರು.


ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇ.ಎನ್.ಟಿ ವೈದ್ಯರಾಗಿರುವ ಹೆಡ್ ಆಂಡ್ ನೆಕ್ ಆನ್ಕಾಲಜಿಯಲ್ಲಿ ಫೆಲೋಶಿಪ್ ಪಡೆದಿರುವ ಡಾ| ರೋಹನ್ ದೀಕ್ಷಿತ್ ಈ ರೋಗಿಯನ್ನು ಪರೀಕ್ಷಿಸಿದಾಗ ಬಾಯಿಯಲ್ಲಿ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು.


ಬಾಯಿಯ ಶಸ್ತ್ರಚಿಕಿತ್ಸೆ ಒಂದು ಸಂಕೀರ್ಣ ಶಸ್ತ್ರಚಿಕಿತ್ಸೆಯಾಗಿದ್ದು, ರಕ್ತನಾಳಗಳಿಗೆ ತೊಂದರೆಯಾಗದಂತೆ ಬಾಯಿಯ ಶಸ್ತ್ರಚಿಕಿತ್ಸೆ ಮಾಡುವುದು ವೈದ್ಯರಿಗೆ ಸವಾಲಾಗಿರುತ್ತದೆ. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರಾದ ಡಾ| ರೋಹನ್ ದೀಕ್ಷಿತ್ ಯಶಸ್ವಿಯಾಗಿ ಈ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ರೋಗಿ ಚೇತರಿಸುತ್ತಿದ್ದಾರೆ. ಅರೆವಳಿಕೆ ತಜ್ಞರಾದ ಡಾ| ಚೈತ್ರಾ. ಆರ್ ಸಹಕರಿಸಿದರು.


ನಗರ ಪ್ರದೇಶದ ಆಸ್ಪತ್ರೆಗಳಿಗೆ ಹೋಲಿಸಿದರೆ ಈ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ದರದಲ್ಲಿ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ. ಹೈಟೆಕ್ ಆಸ್ಪತ್ರೆಗಳಲ್ಲಿ ದೊರೆಯುವ ವೈದ್ಯಕೀಯ ಸೇವೆ ಹಾಗೂ ಸಂಕೀರ್ಣ ಶಸ್ತ್ರಚಿಕಿತ್ಸೆಗಳು ಗ್ರಾಮೀಣ ಜನತೆಗೆ ಮಿತದರದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದೊರೆಯುತ್ತಿದೆ. ಈ ಆಸ್ಪತ್ರೆಯಲ್ಲಿ ಹಲವಾರು ಯಶಸ್ವಿ ಶಸ್ತ್ರಚಿಕಿತೆಗಳನ್ನು ನಡೆಸಲಾಗುತ್ತಿದ್ದು, ಡಾ| ಡಿ. ವೀರೇಂದ್ರ ಹೆಗ್ಗಡೆ, ಮಾತೃಶ್ರೀ ಹೇಮಾವತಿ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

error: Content is protected !!