ಪುದುವೆಟ್ಟು : ಎಲ್ಲರೂ ಸೇರಿ ಒಂದೇ ಮನಸ್ಸಿನಿಂದ ಕೆಲಸ ಮಾಡಿದಾಗ ಸಂಸ್ಥೆಯ ಪ್ರಗತಿಯ ಜೊತೆಗೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ ಎಂದು ಬಿ ಸೋಮಶೇಖರ ಶೆಟ್ಟಿ ಅಭಿಪ್ರಾಯಪಟ್ಟರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹಾಗೂ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ.ಎಸ್ ಸತೀಶ್ ಚಂದ್ರ ಅವರ ಮಾರ್ಗದರ್ಶನದಂತೆ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ, ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಬಿ ಸೋಮಶೇಖರ್ ಶೆಟ್ಟಿ ಅವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನ ತಂಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುಗೆ ಆಗಮಿಸಿ ಶಿಕ್ಷಕರ ವೈಯಕ್ತಿಕ ದಾಖಲೆ ಮತ್ತು ಪ್ರಗತಿ ಪರಿಶೀಲನೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡಿದರು.
ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವ ವಿಕಸನವೇ ಶಿಕ್ಷಣ ಸಂಸ್ಥೆಗಳ ಗುರಿ ಎಂದು ತಿಳಿಸಿದರು. ಸಂಸ್ಥೆಯ ಪ್ರಗತಿಗೆ ಉತ್ತಮ ನಾಯಕತ್ವ ಅಗತ್ಯ ಈ ನಾಯಕತ್ವ ಪುದುವೆಟ್ಟು ಶಾಲೆಯಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದೆ. ಮುಖ್ಯ ಶಿಕ್ಷಕರು ಮತ್ತು ಶಾಲೆಯ ಶಿಕ್ಷಕರ ವೃಂದ ಒಗ್ಗಟ್ಟಿನಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಕಲಿಕೆಗೆ ಪೂರಕ ವಾತಾವರಣ ಪುದುವೆಟ್ಟು ಶಾಲೆಯಲ್ಲಿ ಇರುವುದರಿಂದ ಪಠ್ಯ ಮತ್ತು ಪಠ್ಯೇತರ ವಿಷಯಗಳಿಗೆ ಹೆಚ್ಚಿನ ಒತ್ತು ನೀಡಿ ಪಾಠ ಪ್ರವಚನ ನೀಡಲಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.