24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಹಾಗೂ ಧರ್ಮಸ್ಥಳ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಧರ್ಮಸ್ಥಳ ಕ್ಷೇತ್ರದ ಡಿ.ಹರ್ಷೇಂದ್ರ ಕುಮಾರ್, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಎಸ್. ಸತೀಶ್ಚಂದ್ರ, ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವೀರು ಶೆಟ್ಟಿ ಅವರನ್ನು ಭೇಟಿಯಾಗಿ ಸಂಘದ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿ ಗಣೇಶ್ ಬಿ.ಶಿರ್ಲಾಲು, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷ ಶಿಬಿ ಧರ್ಮಸ್ಥಳ, ಜೊತೆ ಕಾರ್ಯದರ್ಶಿ ಮನೋಹರ್ ಬಳಂಜ ಅವರನ್ನು ಗೌರವಿಸಿದರು.

ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಭುವನೇಶ್ ಜಿ.ಗೇರುಕಟ್ಟೆ, ತಾಲೂಕು ಪತ್ರಕರ್ತರ
ಸಂಘದ ಸದಸ್ಯರಾದ ದೇವಿಪ್ರಸಾದ್, ಆರ್.ಎನ್. ಪೂವಣಿ, ಶ್ರೀನಿವಾಸ್ ತಂತ್ರಿ, ಅರವಿಂದ ಹೆಬ್ಬಾರ್, ಜಾರಪ್ಪ ಪೂಜಾರಿ ಬೆಳಾಲು, ತುಕರಾಮ್ ಬಿ., ಪ್ರಸಾದ್ ಶೆಟ್ಟಿ ಎಣಿಂಜೆ, ಸಂತೋಷ್ ಪಿ.ಕೋಟ್ಯಾನ್ ಬಳಂಜ, ಧನಕೀರ್ತಿ ಆರಿಗ ಉಪಸ್ಥಿತರಿದ್ದರು.

Related posts

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

Suddi Udaya

ತಾಲೂಕು ಮಟ್ಟದ ಭಕ್ತಿಗೀತೆ ಸ್ಪರ್ಧೆ : ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿ ಆದ್ವಿ ದ್ವಿತೀಯ ಸ್ಥಾನ

Suddi Udaya
error: Content is protected !!