27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.13: ಮೊಗ್ರು ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

ಮೊಗ್ರು :ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಮುಗೇರಡ್ಕ ಮೊಗ್ರು ಗ್ರಾಮ ಬೆಳ್ತಂಗಡಿ ತಾಲೂಕು ಇದರ ಸಹಭಾಗಿತ್ವದಲ್ಲಿ ನಾಳೆ ಜ. 13 ರಂದು ಶ್ರೀ ಕ್ಷೇತ್ರ ಮುಗೇರಡ್ಕ ವಠಾರದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಲಿದೆ.

ಬೆಳಗ್ಗೆ 6.30 ಕ್ಕೆ ಗಣಹೋಮ, ಬೆಳಗ್ಗಿನಿಂದ ಸಂಜೆಯವರೆಗೆ ಸ್ಥಳೀಯ 10 ಭಜನಾ ಮಂಡಳಿಗಳಿಂದ ಅರ್ಧಏಕಾಹ ಭಜನೆ, ಸಂಜೆ 5.00 ರಿಂದ ಸ್ಥಳೀಯ ಶಾಲಾ ಮಕ್ಕಳಿಂದ ಮತ್ತು ಸ್ಥಳೀಯ ಪ್ರತಿಭೆಗಳಿಂದ ಮನೊರಂಜನಾ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8.00 ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ.

ಸಭಾಧ್ಯಕ್ಷರಾಗಿ ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನದ ಆಡಳಿತ ಮೋಕ್ತೆಶರರಾದ ರಾಮಣ್ಣ ಗೌಡ ದೇವಸ್ಯ ಗುತ್ತು, ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ದ ಶಾಸಕರಾದ ಹರೀಶ್ ಪೂಂಜ, ಸಾಮಾಜಿಕ ಹೋರಾಟಗಾರರದ ದಿನೇಶ್ ಕುಮಾರ್ ಜೈನ್ ಪುತ್ತೂರು, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಗಂಗಾಧರ ಪೂಜಾರಿ,ಮಂಗಳೂರು ಆವಿಷ್ಕಾರ ಯೋಗ, ಯೋಗ ಚಿಕಿತ್ಸಕರರಾದ ಕುಶಾಲಪ್ಪ ಗೌಡ ನೆಕ್ಕರಾಜೆ ಇವರ ಉಪಸ್ಥಿಯಲ್ಲಿ ನೆರವೇರಲಿದೆ.

ರಾತ್ರಿ 10 ರಿಂದ ರಾಜ್ಯ ಪ್ರಶಸ್ತಿ ಪುರಸ್ಕೃತ ಮುರಳಿ ಬ್ರದರ್ಸ್ ಡ್ಯಾನ್ಸ್ ಕ್ರಿವ್ ಪುತ್ತೂರು ಇವರಿಂದ ನೃತ್ಯ ವೈಭವ ನಡೆಯಲಿದೆ.ಈ ಎಲ್ಲಾ ಕಾರ್ಯಕ್ರಮಗಳಿಗೆ ಭಜನಾ ಮಂಡಳಿ ಆಡಳಿತ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನದ ಆಡಳಿತ ಮೋಕ್ತೆಶರರಾದ ರಾಮಣ್ಣ ಗೌಡ ದೇವಸ್ಯಗುತ್ತು, ಮನೋಹರ ಗೌಡ ಅಂತರ ಗುತ್ತು, ಭಜನಾ ಮಂದಿರ ಆಡಳಿತ ಸಮಿತಿ ಕಾರ್ಯದರ್ಶಿ ಪುರಂದರ ಗೌಡ ನೈಮಾರ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya
error: Content is protected !!