32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

ಬೆಳ್ತಂಗಡಿ: ಮನೆಯೊಂದಕ್ಕೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿದ್ದ ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ ಮಾಡಿದ ಘಟನೆ ಗುರುವಾರ ಬೆಳ್ಳಂಬೆಳಿಗ್ಗೆ ಕವಳಪಡೂರುನಲ್ಲಿ
ನಡೆದಿರುವ ಬಗ್ಗೆ ವರದಿಯಾಗಿದೆ.

ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕ ಉದ್ಯಾನವನದ ಮುಂಭಾಗದಲ್ಲಿರುವ ಮನೆಯಲ್ಲಿ ಪ್ಲೋರಿನ್ ಪಿಂಟೋ ಮತ್ತು ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದ ವೇಳೆ ಈ ದರೋಡೆ ನಡೆಸಲಾಗಿದ್ದು ಸುಮಾರು 2.90 ಲಕ್ಷ ರೂ ಮೌಲ್ಯದ ಚಿನ್ನಾಭರಣ, 30 ಸಾವಿರ ರೂ ನಗದು ಹಾಗೂ ಒಂದು ಮೊಬೈಲ್ ಫೋನ್ ಸೇರಿ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ದೋಚಿದ್ದಾರೆ ಎನ್ನಲಾಗಿದೆ.

ಗುರುವಾರ ಬೆಳಿಗ್ಗೆ ಸುಮಾರು 6.30 ರ ವೇಳೆ ಮನೆಯ ಬೆಲ್ ಬಾರಿಸಿದ್ದು, ಬಾಗಿಲು ತೆರೆದ ಕೂಡಲೇ ಮನೆಯೊಳಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿರುವ ನಗ ನಗದು ಕೊಡುವಂತೆ ಬೆದರಿಸಿದ್ದಾರೆ. ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆ ಒಡ್ಡಿದಾಗ ಹೆದರಿ ಕಪಾಟಿನ ಬೀಗದ ಕೀ ನೀಡಿದ್ದಾರೆ. ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಪ್ಲೋರಿನ್ ಪಿಂಟೋ ಅವರ ಮಗ ಆಸ್ಟಿನ್ ಪಿಂಟೋ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಬಂಟ್ವಾಳ ಗ್ರಾಮಾಂತರ ಪೋಲೀಸ್ ನಿರೀಕ್ಷಕ ಶಿವಕುಮಾರ್, ಠಾಣಾ ಉಪ ನಿರೀಕ್ಷಕ ಹರೀಶ್ ಭೇಟಿ ನೀಡಿದ್ದಾರೆ. ಶ್ವಾನ ದಳ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

Suddi Udaya

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!