April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಠಾರದಲ್ಲಿ ಇರುವ ಉಜಿರೆಯ ಸದ್ಭಾವನೆಯ ಗೋಡೆಯಾದ ಎಸ್.ಡಿ.ಎಂ ವಾಲ್ ಆಫ್ ಗುಡ್ ವಿಲ್ ಇದಕ್ಕೆ ನಿತ್ಯೋಪಯೋಗಿ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು.


ವಿದ್ಯಾರ್ಥಿ ಸ್ವಯಂ ಸೇವಕ ಬೋರೇಶ್ ಅವರು ಯುವದಿನದ ಮಹತ್ವದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಘಟಕದ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಅವರ ನೇತೃತ್ವದಲ್ಲಿ ಉಜಿರೆ ಪರಿಸರದ ಸ್ವಚ್ಛತೆ ಕಾರ್ಯವನ್ನು ಮಾಡಲಾಯಿತು.

ರಾ.ಸೇ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು. ಸ್ವಯಂ ಸೇವಕ ಆದಿತ್ಯ ನಿರೂಪಿಸಿ ವಂದಿಸಿದರು.

Related posts

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್‍ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್: ಗ್ರಾಹಕರಿಗೆ ರೂ.10 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ

Suddi Udaya
error: Content is protected !!