38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ಜ. 12 ರಂದು ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಧ.ಮಂ.ಸ್ವಾಯತ್ತ ಕಾಲೇಜಿನ ಸಂಸ್ಕೃತ ಪ್ರಾಧ್ಯಾಪಕರಾದ ಡಾ.ಶ್ರೀಧರ್ ಭಟ್ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಇವತ್ತಿನ ದಿನ ಯುವಜನರ ಪ್ರೀತಿ ಯುವ ಜನರಿಂದಲೇ ಅಭಿವೃದ್ಧಿ ಎಂಬ ಉದ್ದೇಶ ಇಟ್ಕೊಂಡು ಆಚರಿಸಲಾಗುತ್ತಿದ್ದು ಅತಿ ಹೆಚ್ಚು ಯುವಜನ ಇರುವ ಭಾರತ ದೇಶವನ್ನು ಪುನರ್ಜೀವನ ಮಾಡಲು ಯುವ ಜನರಿಂದಲೇ ಸಾಧ್ಯ ವಿದ್ಯಾರ್ಥಿ ಜೀವನವನ್ನು ಸರಿಯಾಗಿ ಬಳಸಿಕೊಳ್ಳಬೇಕು ಇಲ್ಲವಾದಲ್ಲಿ ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತದೆ. ನಿಮ್ಮಲ್ಲಿ ಅದ್ಬುತವಾದ ಭವಿಷ್ಯವಿದೆ ಅದನ್ನು ಸರಿಯಾಗಿ ಬಳಸಿದರೆ ಭಾರತವನ್ನು ವಿಶ್ವಗುರುವನ್ನಾಗಿ ಮಾಡಲು ಸಾದ್ಯ ಎಂಬ ಸ್ವಾಮಿ ವಿವೇಕಾನಂದರ ಮಾತುಗಳನ್ನು ಪುನರುಚ್ಚಿಸಿದ ಅವರು ವಿದ್ಯಾರ್ಥಿಗಳು ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಚಾರಿತ್ಯ ಈ ಮೂರು ಗುಣಗಳನ್ನು ಪೂರ್ಣ ಪ್ರಮಾಣದಲ್ಲಿ ತೊಡಗಿಸಿ ಕೊಂಡಲ್ಲಿ ಯಾವುದೇ ಕೆಲಸದಲ್ಲೂ ಯಶಸ್ಸು ಗ್ಯಾರಂಟಿ. ಯಾವುದೇ ಕೆಲಸವನ್ನು ಆಲೋಚಿಸಿ ಮಾಡಿ, ಹಿತವಾಗುವಂತೆ ಮಾತನಾಡಿ ಎಂದು ಹೇಳಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಪ್ರಾಂಶುಪಾಲ ವಿ ಪ್ರಕಾಶ್ ಕಾಮತ್ ಇವರು ಮಾತನಾಡಿ ವಿವೇಕಾನಂದರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಸಮಾಜದ ಏಳಿಗೆಗೆ ಶ್ರಮಿಸೋಣ ಎಂದು ವಿನಂತಿ ಮಾಡಿಕೊಂಡರು. ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಗಳು ಹಾಗೂ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಶಾಲಿನಿ ಕಾರ್ಯಕ್ರಮ ನಿರೂಪಿಸಿದರು ಹಾಗೂ ನಾಗಶ್ರೀ ಅತಿಥಿಗಳ ಪರಿಚಯಿಸಿ ಸ್ವಾಗತಿಸಿ ವಂದಿಸಿದರು‌

Related posts

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ

Suddi Udaya

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya

ವೇಣೂರು: ತುಂಬೆದಲ್ಕೆ ನಿವಾಸಿ ಕೃಷಿಕ ಸೇಸಪ್ಪ ಪೂಜಾರಿ ನಿಧನ

Suddi Udaya
error: Content is protected !!