ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಯರ ಮಕ್ಕಳನ್ನು ಆರೈಕೆ ಮಾಡಲು ಕೂಸಿನ ಮನೆ ಶಿಶು ಪಾಲನಾ ಕೇಂದ್ರವನ್ನು ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸದಸ್ಯರಾದ ನಿಸಾರ್, ತಾಜುದ್ಧಿನ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್, ಕಾರ್ಯದರ್ಶಿ ಆನಂದ್, ನರೇಗಾ ಇಂಜಿನಿಯರ್ ಶರಣ್ ರೈ, ಶಿಶು ಪಾಲಕರು ಹಾಗೂ ಮಕ್ಕಳ ಪೋಷಕರು, ಗ್ರಾಮ ಪಂಚಾಯತ್ ಸಿಬ್ಬಂದಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment

error: Content is protected !!