September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ & ರೆಂಜರ್ಸ್ ವಿಭಾಗದ ವತಿಯಿಂದ ‘ವಿವೇಕಾನಂದ ಜಯಂತಿ’ಯನ್ನು ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಸದಸ್ಯ ನಾರಾಯಣ ಫಡ್ಕೆ ಇವರು ವಿದ್ಯಾರ್ಥಿಗಳಿಗೆ ಯುವ ದಿನದ ಸಂದೇಶವನ್ನು ನೀಡಿ, ‘ಸ್ವಾಮಿ ವಿವೇಕಾನಂದರು ಭಾರತದ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಅಜರಾಮರರು, ಇವರು ಸತ್ಯ, ಧರ್ಮ, ನ್ಯಾಯಕ್ಕಾಗಿ ಜೀವನವನ್ನು ಮುಡಿಪಾಗಿಟ್ಟವರು, ಇವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ಪುರುಷ ಸಿಂಹರಾಗಿ, ಬಲಿಷ್ಠ ಭಾರತದ ನಿರ್ಮಾಣ ಮಾಡಬೇಕು’ ಎಂದರು.

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ ಎ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ಸ್ವಯಂಸೇವಕಿ ಕುಮಾರಿ ಪುಣ್ಯಶ್ರೀ ಧನ್ಯವಾದಗೈದರು.

Related posts

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

Suddi Udaya

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಕಿಲ್ಲೂರು ಸ.ಉ. ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Suddi Udaya
error: Content is protected !!