September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ಗಲಾಟೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಕಳೆದ ಐದು ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಅ.ಕ್ರ 178/18 u/s 323,325 IPC ಗಲಾಟೆ ಪ್ರಕರಣ ನಡೆದ‌ ನಂತರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡ ಬಳಿಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೇ ಐದು ವರ್ಷಗಳ ಕಾಲ ಊರು ಬಿಟ್ಟು ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಪುತ್ತೂರು ತಾಲೂಕಿನ ಕಲ್ಲಗುಡ್ಡೆ, ನೂಜಿಬಾಲ್ತಿಲ ಗ್ರಾಮದ ಮಂಜೋಲಿ ನಿವಾಸಿ ವರ್ಗೀಸ್ ಯಾನೆ ರಾಜನ್ ಎಂಬವರ ಪುತ್ರ ಪ್ರಬೀನ ಯಾನೆ ಪ್ರವೀಣ(34) ಎಂಬಾತ ಊರಿಗೆ ಬಂದಿರುವ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿ ಜನವರಿ 11ರಂದು ಮದ್ಯಾಹ್ನ 1 ಗಂಟೆಗೆ ಪುತ್ತೂರು ತಾಲೂಕು ನೂಜಿಬಾಲ್ತಿಲ ಬಸ್ಸು ತಂಗುದಾಣದ ಬಳಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ನಾಗೇಶ್ ಕದ್ರಿಹಾಗೂ ಧರ್ಮಸ್ಥಳ ಠಾಣಾ ಪೊಲೀಸ್ ಉಪ-ನಿರೀಕ್ಷಕರಾದ ಅನಿಲ್ ಕುಮಾರ್ ಡಿ. ಮಾರ್ಗದರ್ಶನದಂತೆ ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿ ರಾಜೇಶ್.ಎನ್ ಮತ್ತು ಗೋವಿಂದ ರಾಜ್ ರವರು ಆರೋಪಿಯನ್ನು ಬಂಧಿಸಿ ಬೆಳ್ತಂಗಡಿ ಜೆಮ್ ಎಫ್.ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ವಿವರಿಸಿ ಮನವಿ : ಬುರುಡೆ ಕೇಸ್ ಚಾರ್ಜ್‌ಶೀಟ್‌ಗೆ ಚಿನ್ನಯ್ಯ ಅರ್ಜಿ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

Suddi Udaya

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ಗುರುವಾಯನಕೆರೆ ಐವರು ವಿದ್ಯಾರ್ಥಿಗಳಿಗೆ ಸೈಕಲ್ ಕೊಡುಗೆ ನೀಡಿದ ಉದ್ಯಮಿ ಉಮರ್ ಜಿ.ಕೆ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಇಂಡಕ್ಷನ್ ಕಾರ್ಯಕ್ರಮ

Suddi Udaya
error: Content is protected !!