ಚಾರ್ಮಾಡಿ ಘಾಟಿಯ ವ್ಯೂ ಪಾಯಿಂಟ್ ನಲ್ಲಿ ಟಿಪ್ಪರ್ ಲಾರಿ 1000 ಅಡಿ ಕ್ಕಿಂತಾ ಹೆಚ್ಚು ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ ಜ.12 ರಂದು ಮಧ್ಯರಾತ್ರಿ ನಡೆದಿದೆ.


ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ಟಿಪ್ಪರ್ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ ಉರುಳಿ ಬಿದ್ದ ರಭಸಕ್ಕೆ ಟಿಪ್ಪರ್ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ ಚಾಲಕನಿಗೆ ಸೊಂಟಕ್ಕೆ ತುಂಬಾ ಪೆಟ್ಟಾಗಿದ್ದು ಅಂಬುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸ್ ಅಭಿಷೇಕ್, ಅರಣ್ಯ ಇಲಾಖೆ ಬೀಟ್ ಫಾರೆಸ್ಟ್ ಅಭಿಜಿತ್ , ಸಮಾಜ ಸೇವಕ ಆರಿಫ್ ಹಾಗೂ ಕುಂಜಿಮೊಣು ಕಾರ್ಯಚರಣೆಯಲ್ಲಿ ಇದ್ದರು.