April 2, 2025
Uncategorized

ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

ಧರ್ಮಸ್ಥಳ: ಧಾರ್ಮಿಕ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹದ ಅಂಗವಾಗಿ ಜ.12 ರಂದು ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ದೇವಳದ  ಸಿಬ್ಬಂದಿ, ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಮತ್ತು ಊರಿನ ನಾಗರಿಕರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಜನವರಿ 7 ರಿಂದ 13ರ ವರೆಗೆ ಮಂದಿರ, ಚರ್ಚ್, ಮಂದಿರ, ಬಸದಿ, ಮಸೀದಿಗಳು ಸೇರಿದಂತೆ ಎಲ್ಲಾ ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿ ಸ್ವಚ್ಛತಾ ಸಪ್ತಾಹ ಆಯೋಜಿಸಲಾಗಿದೆ. ರಾಜ್ಯದೆಲ್ಲೆಡೆ 16529 ಶ್ರದ್ಧಾಕೇಂದ್ರಗಳನ್ನು  ಗುರುತಿಸಿದ್ದು, 4,13,010 ಮಂದಿ ಸ್ವಯಂ ಸೇವಕರು ಸ್ವಚ್ಛತಾ ಸಪ್ತಾಹದಲ್ಲಿ ಭಾಗವಹಿಸುತ್ತಿದ್ದಾರೆ.


ಕಳೆದ 8 ವರ್ಷಗಳಿಂದ ವರ್ಷಕ್ಕೆ ಎರಡು ಬಾರಿ, ಸ್ವಾತಂತ್ಯ್ರ ದಿನಾಚರಣೆ ಮತ್ತು ಮಕರ ಸಂಕ್ರಾಂತಿ ಸಂದರ್ಭ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹ ಆಯೋಜಿಸಲಾಗುತ್ತದೆ.

Related posts

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya
error: Content is protected !!