April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಗೆ ಕೇಂದ್ರ ಸರಕಾರದ PACS AS MSC ಯೋಜನೆಯಡಿ ನಿರ್ಮಾಣವಾದ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನದ ಉದ್ಘಾಟನಾ ಸಮಾರಂಭವು ಜ.13 ರಂದು ಕಡಿರುದ್ಯಾವರ ಶಾಖಾ ವಠಾರದಲ್ಲಿ ನಡೆಯಿತು.


ನೂತನ ಕಟ್ಟಡದ ಉದ್ಘಾಟನೆಯನ್ನು ಸಂಸದ ನಳಿನ್ ಕುಮಾರ್ ನೆರವೇರಿಸಿದರು. ಸಭಾ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್, ಬೆಂಗಳೂರು ನಬಾರ್ಡ್ ಸಹಾಯಕ ಮಹಾಪ್ರಬಂಧಕಿ ಸಂಗೀತಾ ಕರ್ತಾ, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಬಿ.ವಿ. ಪ್ರತಿಮಾ, ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಗೌಡ, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಾಜಿ ಅಧ್ಯಕ್ಷ ವಿನಯಚಂದ್ರ ಗೌಡ ವಿ., ಕಡಿರುದ್ಯಾವರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಪ್ರವೀಣ ಗೌಡ, ಕಡಿರುದ್ಯಾವರ ಉದ್ದಾರ (ಕಟ್ಟಡ ನಿರ್ಮಿಸಲು ನಿವೇಶನ ನೀಡಿದವರು) ನಿವೃತ್ತ ಶಿಕ್ಷಕ ಜನಾರ್ದನ ಗೌಡ, ಕಡಿರುದ್ಯಾವರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಸಂಘದ ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲ್ ರವರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ವಸಂತ ಗೌಡ. ಕೆ, ನಿರ್ದೇಶಕರುಗಳಾದ ಲಕ್ಷ್ಮಣ ಗೌಡ ಎನ್, ಉಮೇಶ್ ಎ.ಬಿ, ಶ್ರೀಮತಿ ತನುಜಾ ಶೇಖರ್, ಆನಂದ ಗೌಡ ಬಿ., ರಮೇಶ ಕೆಂಗಾಜೆ, ವಿನಯಚಂದ್ರ, ಶ್ರೀಮತಿ ವಿಜಯ, ರಘುನಾಥ, ಸತೀಶ ನಾಯ್ಕ ಶ್ರೀಮತಿ ಭವ್ಯ, ಸಂದೇಶ್ ಕುಮಾರ್ ಎಂ.ಡಿ.ಸಿ.ಸಿ ಬ್ಯಾಂಕಿನ ಪ್ರತಿನಿಧಿ ಹಾಗೂ ವೃತ್ತಿಪರ ನಿರ್ದೇಶಕರಾದ ಶ್ರೀಮತಿ ಪುಷ್ಪಾಲತಾ, ಕೇಶವ ಎಂ.ಕೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಹೇಮಾವತಿ, ಯಶೋಧ ಪ್ರಾರ್ಥಿಸಿ, ಸಂಘದ ಅಧ್ಯಕ್ಷ ಹರೀಶ್ ಸಾಲ್ಯಾನ್ ಸ್ವಾಗತಿಸಿದರು.

Related posts

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya
error: Content is protected !!