ಮರೋಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆಯನ್ನು ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯವರಾದ ದಿವ್ಯ ಎನ್ ಇವರ ವಿಶೇಷ ಮುತುವರ್ಜಿಯಿಂದ ಸಭೆಯನ್ನು ವಿಶಿಷ್ಟ ರೀತಿಯಲ್ಲಿ ಪಂಚಾಯತ್ ನ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಜ.12 ರಂದು ನಡೆಯಿತು.
ಸಭೆಯಲ್ಲಿ ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ರವರು ಸಭೆಯನ್ನು ಉದ್ದೇಶಿಸಿ, ವಿಕಲಚೇತನರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಯ ಕುರಿತು ಸಂಪೂರ್ಣ ಮಾಹಿತಿ ಹಾಗೂ ಅದನ್ನು ಪಡೆಯುವ ಬಗ್ಗೆ ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ದಿವ್ಯ. ಎನ್ ಸಭೆಯಲ್ಲಿದ್ದ ಎಲ್ಲ ವಿಕಲಚೇತನರಿಗೆ 6 ರೀತಿಯ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ, ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿಜೇತರಿಗೆ ಬಹುಮಾನವನ್ನು ನೀಡುವ ಮೂಲಕ ಪ್ರತಿಭಾವಂತ ವಿಕಲಚೇತನರನ್ನು ಗುರುತಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಹೆಚ್ ಒ, ಪಂಚಾಯತ್ ನ ಸದಸ್ಯರು, ಸಿಬ್ಬಂದಿ ವರ್ಗ ಭಾಗವಹಿಸಿದರು.