ಮೇಲಂತಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 2023 – 24ನೇ ಸಾಲಿನ ಮಹಿಳಾ ಗ್ರಾಮ ಸಭೆಯು ಜ.12 ರಂದು ನಡೆಯಿತು.
ಗ್ರಾಮ ಸಭೆಯಲ್ಲಿ ಬೆಳ್ತಂಗಡಿ ಆರೋಗ್ಯ ಇಲಾಖೆ ಆಪ್ತ ಸಮಾಲೋಚಕಿ ಶ್ರೀಮತಿ ರಮ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಮಹಿಳಾ ಸಬಲೀಕರಣದ ಬಗ್ಗೆ ಮಹಿಳೆಯರು ಮಾನಸಿಕ ಹಾಗೂ ದೈಹಿಕವಾಗಿ, ಸಾಮಾಜಿಕವಾಗಿ ಸದೃಢವಾಗುವ ಕುರಿತು ಸಭೆಗೆ ಮಾಹಿತಿಯನ್ನು ವಿಸ್ತಾರವಾಗಿ ತಿಳಿಸಿದರು.
ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆ – 2024ಕ್ಕೆ ಸಂಬಂಧಿಸಿ ಇವಿಎಂ ವಿವಿ ಪ್ಯಾಟ್ ಗಳಲ್ಲಿ ಮತದಾನ ಮಾಡುವ ಕುರಿತು ಪ್ರಾತ್ಯಕ್ಷಿಕೆಯನ್ನು ಹೇಮಚಂದ್ರ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಇವರು ನಡೆಸಿಕೊಟ್ಟರು. ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿಯವರು ವಹಿಸಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರಬೇಕು ಸರಕಾರದಿಂದ ದೊರೆಯುವ ವಿವಿಧ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರರಾಜ ಎಂ., ಸಂತೋಷ, ಪ್ರಭಾಕರ ಆಚಾರ್ಯ ಹಾಗೂ ಬೀಟ್ ಪೋಲಿಸ್ ಅಶೋಕ್ ಹಾಗೂ ಗೊಂಚಲು ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು.
ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನಿರ್ಮಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.