37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

ಮುಂಡಾಜೆ: ಜ.11 ರಿಂದ ಜ. 17 ರ ವರೆಗೆ ದೇಶದಾದ್ಯಂತ ನಡೆಯುತ್ತಿರುವ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ರ ಅಂಗವಾಗಿ ಮುಂಡಾಜೆ ಪದವಿ ಪೂರ್ವ ಕಾಲೇಜು, ಮುಂಡಾಜೆ ಇಲ್ಲಿನ ರೋವರ್ಸ್ & ರೇಂಜರ್ಸ್ ವಿಭಾಗದ ವತಿಯಿಂದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಎಎಸ್ ಐ ಹರಿಪ್ರಸಾದ್ ಇವರು ರಸ್ತೆ ಸುರಕ್ಷತೆಯ ಪಾಲನೆ ಹಾಗೂ ಸಂಚಾರಿ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಜಾಲಿ ಓ ಎ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆಯ ಸಂಚಾಲಕರಾದ ನಾರಾಯಣ ಗೌಡ ಕೊಳಂಬೆ, ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಸುನಿಲ್, ರೇಂಜರ್ ಲೀಡರ್ ವಸಂತಿ, ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ ಉಪಸ್ಥಿತರಿದ್ದರು.


ರೇಂಜರ್ ವಿದ್ಯಾರ್ಥಿನಿಯರಾದ ಮಧುಶ್ರೀ ಸ್ವಾಗತಿಸಿ, ಸಂಪದಾ ಕಾರ್ಯಕ್ರಮವನ್ನು ನಿರೂಪಿಸಿ, ಶ್ರಾವ್ಯ ಧನ್ಯವಾದಗೈದರು.

Related posts

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

Suddi Udaya

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

Suddi Udaya
error: Content is protected !!