September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೋವರ್ ರೇಂಜರ್ಸ್, ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸ್ನಾತ್ತಕೋತ್ತರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಜ.12 ರಂದು ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿದ್ದ ಡಾ. ಸುಬ್ರಹ್ಮಣ್ಯ ಕೆ. ಇವರು ಮಾತನಾಡಿ ಸ್ವಾಮಿ ವಿವೇಕಾನಂದರ ಸಂದೇಶ ಇಂದಿನ ಯುವ ಜನತೆಗೆ ದಾರಿದೀಪವಾಗಿದೆ ಅವರ ಆದರ್ಶಗಳು ಮುಂದಿನ ಅನೇಕ ಪೀಳಿಗೆಗಳಿಗೆ ದರ್ಶಿತ್ವವನ್ನು ನೀಡುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ರಾಘವ ಎನ್. ಇವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲರಾದ ಡಾ. ಶರತ್ ಕುಮಾರ್ ಟಿ ಕೆ , ಸ್ನಾತ್ತಕೋತ್ತರ ವಿಭಾಗದ ಸಂಯೋಜಕರಾದ ಡಾ. ರವಿ ಎಂ ಎನ್, ರೇಂಜರ್ ಲೀಡರ್ ಪ್ರೊಫೆಸರ್ ರಾಜೇಶ್ವರಿ ಎಚ್ಎಸ್, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಪದ್ಮನಾಭ ಹಾಗೂ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಪ್ರೊಫೆಸರ್ ನವೀನ್ ಉಪಸ್ಥಿತರಿದ್ದರು.

ಕುಮಾರಿ ಪವಿತ್ರ ಸ್ವಾಗತಿಸಿ, ಶ್ರೀಮತಿ ಪ್ರಜ್ಞಾ ವಂದಿಸಿದರು. ಲೋಲಾಕ್ಷ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ಡ್ರೈವ್

Suddi Udaya

ಲಾಯಿಲ-ಧರ್ಮಸ್ಥಳ ದಾರಿ ಮಧ್ಯೆ ಮಹಿಳೆಯೊಬ್ಬರ ಕರಿಮಣಿ ಸರ ಕಳೆದು ಹೋಗಿದೆ

Suddi Udaya

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya
error: Content is protected !!