ಶಿರ್ಲಾಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿಕಲಚೇತನರ ಸಮನ್ವಯ ಗ್ರಾಮ ಸಭೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಎಂ ಇವರ ಅಧ್ಯಕ್ಷತೆಯಲ್ಲಿ ಜ.12ರಂದು ನಡೆಸಲಾಯಿತು.
ತಾಲೂಕು ಪಂಚಾಯತ್ ನ ವಿವಿದ್ದೊದ್ದೇಶ ಪುನರ್ವಸತಿ ಸಂಯೋಜಕ ಜೋನ್ ಬ್ಯಾಪ್ಟಿಸ್ಟ್ ಡಿ ಸೋಜಾ ಇವರು ಭಾಗವಹಿಸಿ ವಿಕಲಚೇತನರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳಾದ ವಿಶಿಷ್ಟ ಗುರುತಿನ ಚೀಟಿ, ಬಸ್ ಪಾಸ್, ಸಾಧನ ಸಲಕರಣೆಗಳು ಹಾಗೂ ಎಂಡೋಸಲ್ಫಾನ್ ಕಾಡ್೯ ನ ಬಗ್ಗೆ ಮಾಹಿತಿ ನೀಡಿದರು.
ಸಿಹೆಚ್ ಒ ರವರು ಆರೋಗ್ಯಕಾಡ್೯ ನ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಅಧ್ಯಕ್ಷೆ ಉಷಾ ಎಂ. ಮಾತನಾಡಿ ಗ್ರಾಮ ಪಂಚಾಯತ್ ನಿಂದ ಸಿಗುವ ಸೌಲಭ್ಯಗಳನ್ನು ತಿಳಿಸಿದರು ಹಾಗೂ ವಿಕಲಚೇತನರ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ತಿಳಿಸಲು ಹೇಳಿದರು.
ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ ಬಂಗೇರ, ಪಂಚಾಯತ್ ಕಾರ್ಯದರ್ಶಿಯವರು, ಹಾಗೂ ಪಂಚಾಯತ್ ಸದಸ್ಯರು ಮತ್ತು ಅಂಗನವಾಡಿ, ಆಶಾ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ, ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದರು.
ಪಂಚಾಯತ್ ಸಿಬ್ಬಂದಿ ಪವಿತಾ ಇವರ ನಿರೂಪಣೆಯೊಂದಿಗೆ ಪುನರ್ವಸತಿ ಕಾರ್ಯಕರ್ತ ಹರೀಶ್ ಧನ್ಯವಾದವಿತ್ತರು.