30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

ಕನ್ಯಾಡಿ-1: ಕನ್ಯಾಡಿ ಸರಕಾರಿ ಶಾಲೆಯಲ್ಲಿ ಕಳೆದ 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯರಾದ ಹನುಮಂತರಾಯ ಇವರ ನಿಸ್ವಾರ್ಥ ಸೇವೆಯ ರಜತ ಸಂಭ್ರಮ ಕಾರ್ಯಕ್ರಮವು ನಡೆಯಿತು.


ಪ್ರಸ್ತುತ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ನೋಣಯ್ಯ ಗೌಡ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಸುನಿಲ್ ಶೆಟ್ಟಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.


13 ಜನವರಿ1999ಕ್ಕೆ ಸರಕಾರಿ ಸೇವೆಗೆ ಸೇರಿ, ಇಂದು ಸರಿಯಾಗಿ 25 ವರ್ಷ ಪೂರ್ಣಗೊಳಿಸಿದ ಸವಿನೆನಪಿಗಾಗಿ ಹನುಮಂತರಾಯ ಇವರನ್ನು ಶಾಲೆಯ ಎಸ್ ಡಿ ಎಂ ಸಿ, ಶಿಕ್ಷಕ ವೃಂದ ಪಾಲಕರು ಹಾಗೂ ವಿದ್ಯಾರ್ಥಿಗಳ ಪರವಾಗಿ ಆತ್ಮೀಯವಾಗಿ ಸನ್ಮಾನಿಸಲಾಯಿತು.


ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಶ್ರೀಯುತರು ಕಳೆದ 25 ವರ್ಷಗಳಿಂದ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸರ್ವರ ಸಹಕಾರ ಅತ್ಯಗತ್ಯ. ಅದೇ ರೀತಿ ತಮಗೆ ಸಹಕರಿಸಿದ ಸರ್ವರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷ ನೋಣಯ್ಯ ಗೌಡ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಸುನಿಲ್ ಶೆಟ್ಟಿ, ಶಿಕ್ಷಕರಾದ ವಿಕಾಸ್ ರಾವ್, ರಾಕೇಶ್, ಶ್ರೀಮತಿ ನಿಶ್ಮಿತಾ ಇವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ವಿಕಾಸ್ ರಾವ್ ಪ್ರಾಸ್ತವಿಸಿ , ಸ್ವಾಗತಿಸಿದರು. ಶ್ರೀಮತಿ ನಿಶ್ಮಿತಾ ಧನ್ಯವಾದವನ್ನಿತ್ತರು. ಶ್ರೀಮತಿ ಪ್ರಮೀಳಾ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಹರಿತ ಸಹಕರಿಸಿದರು. ಕಾರ್ಯಕ್ರಮಕ್ಕೆ ಹಳೆ ವಿದ್ಯಾರ್ಥಿಗಳು, ಎಸ್ ಡಿ ಎಂ ಸಿ ಹಾಗೂ ಪಾಲಕರು ಸಹಕಾರವನ್ನು ಇತ್ತರು.

Related posts

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya
error: Content is protected !!