27.5 C
ಪುತ್ತೂರು, ಬೆಳ್ತಂಗಡಿ
April 3, 2025
Uncategorized

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ೨೦೨೨-೨೩ ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ಇವರ ಅಧ್ಯಕ್ಷತೆಯಲ್ಲಿ ಜ.೧೩ರಂದು ಸಂಘದ ಸಭಾ ಭವನದಲ್ಲಿ ಜರಗಿತು. ಸಂಘದ ಪ್ರಧಾನ ಕಾರ್ಯದರ್ಶಿ ಜಯವಿಕ್ರಮ್ ಕಲ್ಲಾಪು ವರದಿ ವಾಚಿಸಿದರು, ಕೋಶಾಧಿಕಾರಿ ಅಭಿನಂದನ್ ಹರೀಶ್ ಕುಮಾರ್ ಜಮಾ ಖರ್ಚು ಮಂಡಿಸಿದರು. ಸಂಘದ ಗೌರವ ಅಧ್ಯಕ್ಷ ಮಾಜಿ ಶಾಸಕ ಕೆ. ವಸಂತ ಬಂಗೇರ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಹೆಚ್., ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಜಿತಾ ವಿ. ಬಂಗೇರ, ಸಂಘದ ಉಪಾಧ್ಯಕ್ಷ ಶೇಖರ ಬಂಗೇರ, ಜತೆ ಕಾರ್ಯದರ್ಶಿ ರಾಜೀವ್ ಸಾಲಿಯಾನ್,ಪದಾಧಿಕಾರಿಗಳು, ನಿರ್ದೇಶಕರು, ಮಾಜಿ ಅಧ್ಯಕ್ಷರುಗಳುಗಳಾದ ವಸಂತ ಸಾಲಿಯಾನ್, ಪಿ. ಕೆ. ರಾಜು ಪೂಜಾರಿ,ಪೀತಾ೦ಬರ ಹೇರಾಜೆ, ಯೋಗೀಶ್ ಕುಮಾರ್, ಜಯರಾಮ ಬಂಗೇರ ಹೇರಾಜೆ, ಭಗೀರಥ ಜಿ., ಸೋಮನಾಥ ಬಂಗೇರ, ಮಾಜಿ ನಿರ್ದೇಶಕರುಗಳು, ಸದಸ್ಯರು ಹಾಜರಿದ್ದರು. ಸಭೆಯಲ್ಲಿ ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಗೌರವ ಅಧ್ಯಕ್ಷ ಕೆ. ವಸಂತ ಬಂಗೇರ ವಿತರಿಸಿದರು. ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

Related posts

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

Suddi Udaya

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!