24 C
ಪುತ್ತೂರು, ಬೆಳ್ತಂಗಡಿ
July 25, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್ ಸ್ಕಿಡ್ಆಗಿ ಸವಾರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಜ.14 ರಂದು ನಡೆದಿದೆ. ‌

ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್ ಕೆಎ 19 ಇಪಿ 6594 ನೇ ಬೈಕನ್ನು ಅದರ ಸವಾರ ಜಂಶಾದ್‌ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಸವಾರನ ಚಾಲನಾ ಹತೋಟಿ ತಪ್ಪಿ ಬೈಕ್‌ ಸ್ಕಿಡ್‌ ಆಗಿ ರಸ್ತೆಗೆ ಬಿದ್ದಿದ್ದು , ಪರಿಣಾಮವಾಗಿ ಜಂಶಾದ್‌ ರವರ ತಲೆಗೆ ತೀವ್ರ ರಕ್ತ ಗಾಯವಾಗಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ಸಾವ್ಯ ಗ್ರಾಮದ ನಿವಾಸಿ ಹರೀಶ್‌ ಹೆಗ್ಡೆ ಹಾಗೂ ಅಲ್ಲಿ ಸೇರಿದ್ದ ಸಾರ್ವಜನಿಕರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ .ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 06/2024 ಕಲಂ: 279,338 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya

ಧರ್ಮಸ್ಥಳ: ಡಿ ಹರ್ಷೇಂದ್ರ ಕುಮಾರ್ ರವರಿಗೆ ಹುಟ್ಟುಹಬ್ಬದ ಸಂಭ್ರಮ,ಶಾಂತಿವನ ಟ್ರಸ್ಟ್ ನಿಂದ ಗೌರವ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆ

Suddi Udaya
error: Content is protected !!