24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

ಬೆಳ್ತಂಗಡಿ: ನಡ ಗ್ರಾಮದ ಕುತ್ರೊಟ್ಟು ಎಂಬಲ್ಲಿ ದ್ವಿಚಕ್ರ ವಾಹನ ಮಗುವಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಜ.14 ರಂದು ನಡೆದಿದೆ.

ನಡ ಗ್ರಾಮದ ಹೊಕ್ಕಿಲ ನಿವಾಸಿ ನಿರೀಕ್ಷಾ (8) ಗಾಯಗೊಂಡ ಬಾಲಕಿ.

ನಡ ಗ್ರಾಮದ ಹೊಕ್ಕಿಲ ನಿವಾಸಿ ವೇದಾವತಿ ಅವರು ನೀಡಿದ ದೂರಿನಂತೆ, ಅವರ ಅತ್ತಿಗೆ ನೀಲಾ ಹಾಗೂ ಪತಿಯ ಅಣ್ಣನ ಮಗು ನಿರೀಕ್ಷಾ (8) ಜತೆ ಚಂದ್ಕೂರು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಿಂದ ಅವರ ಮನೆ ಹೊಕ್ಕಿಲ ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವ ವೇಳೆ ಕುತ್ರೊಟ್ಟು ಬಳಿ ದ್ವಿ ಚಕ್ರ ವಾಹನದ ಸವಾರ ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು ರಸ್ತೆ ದಾಟುತ್ತಿದ್ದ ನಿರೀಕ್ಷಾಳಿಗೆ ಢಿಕ್ಕಿ ಹೊಡೆದಿದ್ದಾನೆ.

ಪರಿಣಾಮ ಅವಳು ಅಲ್ಲಿಯೇ ರಸ್ತೆಗೆ ಬಿದ್ದು ಬಲಬದಿಯ ಹಣೆಗೆ ಗುದ್ದಿದ ರಕ್ತಗಾಯ, ಬಲ ಕಾಲಿನ ಮೊಣಗಂಟಿಗೆ ತರಚಿದ ಗಾಯಗೊಂಡು ಚಿಕಿತ್ಸೆ ಬಗ್ಗೆ ಮಂಗಳೂರು ಜ್ಯೋತಿ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Related posts

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ಸುಳ್ಳೋಡಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
error: Content is protected !!