April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು ಜ.14 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ. ಸವನ್ ರೈ, ದಂತವೈದ್ಯರು, ಡಾ. ಶಿರಸ್, ವೈದ್ಯಕೀಯ ಅಧಿಕಾರಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

150ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಯೆನೆಪೋಯ ಸಂಸ್ಥೆಯ ಸಾಮಾಜಿಕ ಕಾರ್ಯಕರ್ತರಾದ ದಿವ್ಯಜ್ಯೋತಿ, ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು, ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ.ಯವರು, ಸಂಸ್ಥೆಯ ವೈದ್ಯರಾದ ಡಾ.ಗೋಪಿಕೃಷ್ಣರವರು, ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿಯವರಾದ ಸಿಂಧು ವಿ.ಎಮ್.ರವರು ಕಾರ್ಯಕ್ರಮ ನಿರೂಪಿಸಿದರು.

Related posts

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಕಬಡ್ಡಿ ಪಂದ್ಯಾಟ: ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya
error: Content is protected !!