ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಗುರುದೇವ ಕಾಲೇಜಿನ ವಿದ್ಯಾರ್ಥಿಯೋರ್ವರನ್ನು ದತ್ತು ತೆಗೆದುಕೊಂಡು ವಿದ್ಯಾಭ್ಯಾಸಕ್ಕೆ ಪೂರ್ಣ ಸಹಕಾರ ನೀಡುತ್ತಿರುವ ಬಳಂಜ‌ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿಯವರ ಪರವಾಗಿ ದೀಪಕ್ ಹೆಚ್.ಡಿ ಅವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಹುಟ್ಟುಹಬ್ಬದ ಸಭಾ ವೇದಿಕೆಯಲ್ಲಿ ಸನ್ಮಾನಿಸಿದರು‌.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರ, ಸುಜಿತಾ ವಿ. ಬಂಗೇರ, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್, ಜಿ.ಪಂ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ, ನ್ಯಾಯವಾದಿ ಭಗೀರಥ ಜಿ, ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಡಾ.ಹರಿಪ್ರಸಾದ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

Leave a Comment

error: Content is protected !!