24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಜ. 21ರಂದು ಮಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶದ ಬಗ್ಗೆ ಪೂರ್ವಭಾವಿ ಸಭೆಯು ಜ.15 ರಂದು ಬೆಳ್ತಂಗಡಿ ನಾರಾಯಣ ಗುರು ಸಭಾಂಗಣದಲ್ಲಿ ನಡೆಯಿತು.

ಸಮಾವೇಶ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಮಾಹಿತಿ ನೀಡಿ ಮಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಅತಿ ಹೆಚ್ಚು ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಮ್ ಎಸ್ ಮಹಮ್ಮದ್ ರವರು ಮಾತನಾಡಿ ಸರ್ಕಾರ ಐದು ಗ್ಯಾರಂಟಿ ನೀಡಿ ಜನಸಾಮಾನ್ಯರಿಗೆ ಸ್ಪಂದಿಸಿದೆ. ಕೋಮುವಾದಿ ಬಿಜೆಪಿಯನ್ನು ಸೋಲಿಸುವ ಪ್ರತಿಜ್ಞೆಯನ್ನು ಕಾರ್ಯಕರ್ತರು ಮಂಗಳೂರಿನಿಂದಲೇ ಮಾಡಬೇಕು ಎಂದರು.
ಸಭೆ ಮೊದಲು ಮಾಜಿ ಶಾಸಕರಾದ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಣೆ ಮಾಡಲಾಯಿತು.

ಪಕ್ಷದ ಮುಖಂಡರಾದ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ಗೌಡ ಮಾತನಾಡಿ ಪಕ್ಷ ವಿರೋಧಿ ಚಟುವಟಿಕೆ ಮಾಡುವವರನ್ನು ದೂರ ಇಡಬೇಕು ,ಬೆಳ್ತಂಗಡಿ ಪಕ್ಷದ ಸೋಲಿಗೆ ಕೆಲವು ಪಕ್ಷದ ನಾಯಕರೆ ಕಾರಣ ಈ ಬಗ್ಗೆ ಕಾರ್ಯಕರ್ತರು ಮುಂದೆ ಜಾಗೃತರಾಗಿರಬೇಕು.ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಸತೀಶ್ ಕೆ ಬಂಗೇರ ಕಾಶಿಪಟ್ಣ ಸ್ವಾಗತಿಸಿ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ .ಎಮ್ ನಾಗೇಶ್ ಕುಮಾರ್ ಗೌಡ ವಂದಿಸಿದರು.

ಸಭೆಯಲ್ಲಿ ಪಕ್ಷದ ಮುಖಂಡರು,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ,ಮಾಜಿ ತಾಲೂಕು ಪಂಚಾಯತ್ ಸದಸ್ಯರು ಗ್ರಾಮ ಸಮಿತಿಯ ಅಧ್ಯಕ್ಷರು,ಪಂಚಾಯತ್ ಸದಸ್ಯರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya
error: Content is protected !!