ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಇತ್ತೀಚೆಗೆ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ ನಡೆಯಿತು.


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭೌತಶಾಸ್ತ್ರ ಉಪನ್ಯಾಸಕರು, ಬಿ ಎಡ್ ಪ್ರಶಿಕ್ಷಣಾರ್ಥಿಯಾದ ಕೀರ್ತನ್ ಕುಮಾರ್ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿಗಳ ತಯಾರಿಕಾ ವಿಧಾನಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ತಿಳಿಸಿಕೊಟ್ಟು, ಪ್ರಸ್ತುತ ಸಮಾಜದಲ್ಲಿ ವಿಜ್ಞಾನದ ಪಾತ್ರ ಮತ್ತು ಮಹತ್ವದ ಬಗ್ಗೆ ತಿಳಿಸಿಕೊಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ವಹಿಸಿಕೊಂಡು ಇಂತಹ ತರಬೇತಿಗಳನ್ನು ವಿದ್ಯಾರ್ಥಿಗಳು ಸರಿಯಾಗಿ ಅರ್ಥೈಸಿಕೊಂಡು ಮುಂದಿನ ದಿನಗಳಲ್ಲಿ ಮಾದರಿಗಳನ್ನು ತಯಾರಿಸುವಂತಹ ವಿದ್ಯಾರ್ಥಿಗಳಾಗಬೇಕು ಎಂದು ತಿಳಿಸಿದರು. ಈ ಒಂದು ಕಾರ್ಯಕ್ರಮವು ಶಾಲೆಯ ವಿಜ್ಞಾನ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು, ವಿಜ್ಞಾನ ಸಂಘದ ಮಾರ್ಗದರ್ಶಿ ಶಿಕ್ಷಕರಾದ ಪವನ್ ಕುಮಾರ್ ಕಾರ್ಯಕ್ರಮವನ್ನು ಆಯೋಜಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Leave a Comment

error: Content is protected !!