37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ : ಕಾಶಿಬೆಟ್ಟು ರೋಟರಿ ಭವನದಲ್ಲಿ ಕೂಟ ಮಹಾಜಗತ್ತು ಸಾಲಿಗ್ರಾಮ ಬೆಳ್ತಂಗಡಿ ಅಂಗ ಸಂಸ್ಥೆ ವತಿಯಿಂದ ಮಕರ ಸಂಕ್ರಾಂತಿ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಕೂಟ ಬಂಧುಗಳನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ರೋ | ಅನಂತ್ ಭಟ್ ಮಚ್ಚಿಮಲೆ ಭಾಗವಹಿಸಿ ಬ್ರಾಹ್ಮಣರು ಸಂಸ್ಕಾರವನ್ನು ಮರೆಯಬಾರದು ನಮ್ಮ ಯುವ ಪೀಳಿಗೆ ಸಮಾಜಮುಖಿ ಸಂಘಸಂಸ್ಥೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಮತ್ತು ಪೋಷಕರು ಪ್ರೇರಣೆ ನೀಡಬೇಕು ಎಂದು ತಿಳಿಸಿದರು.

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಆಯ್ಕೆಗೊಂಡ ಕೂಟ ಬಂಧು ಮುಗುಳಿ ನಾರಾಯಣ್ ರಾವ್, ಅಳದಂಗಡಿ ಸಿ.ಎ ಬ್ಯಾಂಕ್ ನ ಸದಸ್ಯರಾಗಿ ಚುನಾಯಿತಗೊಂಡ ದಿನೇಶ್ ಪಿ.ಕೆ ಹಾಗೂ ಕೂಟ ಮಹಾಜಗತ್ತು ಬೆಳ್ತಂಗಡಿ ಇದರ ಅಧ್ಯಕ್ಷರಾದ ವಿಶ್ವನಾಥ ಹೊಳ್ಳ ಮಜ್ಜನಿಬೈಲು, ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾ ಕಿರಣ್, ಜೆಸಿಐ ಅಂತರ್ರಾಷ್ಟ್ರೀಯ ಸಂಸ್ಥೆಯ ವಲಯದ ಉಪಾಧ್ಯಕ್ಷರಾಗಿ ಚುನಾಯಿತಗೊಂಡ ಶಂಕರ್ ರಾವ್ ಕುತ್ಯಾರು, ಚಾರ್ಮಾಡಿ ಸಿ. ಎ ಬ್ಯಾಂಕ್ ನ ಉಪಾಧ್ಯಕ್ಷರಾಗಿ ಆಯ್ಕೆ ಗೊಂಡ ಪ್ರಕಾಶ್ ನಾರಾಯಣ ರಾವ್ ಇವರುಗಳ ಸಾಧನೆಗಳನ್ನು ಗುರುತಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಆಗಮಿಸಿದ ಸದ್ಯಸರಿಗೆ, ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಕೂಟ ಮಹಾಜಗತ್ತು ಸಾಲಿಗ್ರಾಮ ಕೇಂದ್ರ ಸಂಸ್ಥೆಯ ಕೋಶಾಧಿಕಾರಿಗಳಾದ ವಾಸುದೇವ ಸೋಮಯಾಜಿ, ಬೆಳ್ತಂಗಡಿ ಅಂಗಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಅಡೂರು ವೆಂಕಟ್ರಾಯರು
ಬೆಳ್ತಂಗಡಿ ಅಂಗ ಸಂಸ್ಥೆಯ ಮಹಿಳಾವೇದಿಕೆ ಕಾರ್ಯದರ್ಶಿ ಶ್ರೀಮತಿ ಅಕ್ಷತಾ ಅಡೂರು ಉಪಸ್ಥಿತರಿದ್ದರು.

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಪ್ರಧಾನ ಕಾರ್ಯದರ್ಶಿ ವಿಷ್ಣು ಪ್ರಕಾಶ್ ಎಮ್ ಕಾರ್ಯಕ್ರಮ ಸಂಯೋಜಿಸಿದರು.

Related posts

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಸಾಂಪ್ರದಾಯಿಕ ದಿನಾಚರಣೆ

Suddi Udaya

ಬೆಳ್ತಂಗಡಿ : ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

Suddi Udaya
error: Content is protected !!