April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

ಅಳದಂಗಡಿ: ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಜ.18 ರಂದು ಧಾರ್ಮಿಕ ಸಮಾರಂಭ ನಡೆಯಿತು.

ಅಳದಂಗಡಿ ಚರ್ಚ್ ಧರ್ಮಗುರುಗಳಾದ ರೆ.ಫಾ ಎಲ್ಯಾಸ್ ಡಿ.ಸೋಜಾ ಮಾತಾನಾಡಿ ಎಲ್ಲಾ ಧರ್ಮ ಜಾತಿಯವರು ಶಾಂತಿ ಸಹಬಾಳ್ವೆಯಿಂದ ಬದುಕೋಣ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಬಡಗಕಾರಂದೂರು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀನಿವಾಸ ರಾವ್‌, ಸುಕ್ಕೇರಿ ಶ್ರೀರಾಮ ಶಾಲೆಯ ಅಧ್ಯಕ್ಷ ರಾಜು ಪೂಜಾರಿ, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ, ಉಪಾಧ್ಯಕ್ಷ ಜನಾರ್ಧನ ಕೊಡಂಗೆ, ಗ್ರಾ.ಪಂ.ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲ್ ಭಾಗವಹಿಸಿದ್ದರು.

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದರರಾದ ಶಿವಪ್ರಸಾದ್‌ ಅಜಿಲರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನೆರವೇರಿಸಲಾಯಿತು.

ಸ್ಪರ್ಧಾ ವಿಜೇತರ ಪಟ್ಟಿಯನ್ನು ಶಿಕ್ಷಕರಾದ ಸುನಿಲ್ ಬಾಪಟ್ ವಾಚಿಸಿದರು. ಕಾರ್ಯಕ್ರಮದಲ್ಲಿ ಮೋಹನ್ ಎ.ದಾಸ್ ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್‌ ಸ್ವಾಗತಿಸಿ, ಸಂದೀಪ್ ನೀರಲ್ಕೆ ಕಾರ್ಯಕ್ರಮ ನಿರೂಪಿಸಿದರು.

ಚಿತ್ರ: ಜ್ಯೋತಿಕಾ ಅಳದಂಗಡಿ

Related posts

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಖಾಸಗಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ

Suddi Udaya

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya
error: Content is protected !!