ಬೆಳ್ತಂಗಡಿ : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿಯ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ಇವರಿಗೆ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಸದಾಶಿವ ಊರ, ಕಾರ್ಯದರ್ಶಿ ಯಶೋಧರ ಮುಂಡಾಜೆ, ನಿಕಟಪೂರ್ವ ಅಧ್ಯಕ್ಷ ಅಶ್ವತ್ ಕುಮಾರ್, ಸ್ಥಾಪಕ ಅಧ್ಯಕ್ಷ ರಾಕೇಶ್ ಮೂಡುಕೋಡಿ, ಮಾಜಿ ಅಧ್ಯಕ್ಷ ಹರೀಶ್ ಸುವರ್ಣ ಕನ್ಯಾಡಿ, ಪ್ರಸಾದ್ ಎಂ.ಕೆ, ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್, ಹಿರಿಯ ಸಲಹೆಗಾರರಾದ ಗೋಪಾಲಕೃಷ್ಣ ಸಾಲಿಯಾನ್, ವಿಠಲ ಸಿ ಪೂಜಾರಿ, ಉಪಾಧ್ಯಕ್ಷ ಸಂತೋಷ್ ಅರಳು, ನಿರ್ದೇಶಕರಾದ ನಾಗೇಶ್ ಆದೇಲು, ಸದಸ್ಯರಾದ ಪ್ರಶಾಂತ್ ಪಾದೆಗುತ್ತು ಉಪಸ್ಥಿತರಿದ್ದರು.











