ಮರೋಡಿ : ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮವು ಜ.25ರಿಂದ ಜ.29 ರವರೆಗೆ ನಡೆಯಲಿದೆ.
ಜ.25 ರಂದು ರಾತ್ರಿ 9.00 ಕ್ಕೆ ವಾಸ್ತು ರಾಕ್ಷೋಘ್ನ ಹೋಮ, ಪ್ರಾಕಾರ ಬಲಿ, ನಿತ್ಯಪೂಜೆ. ಜ.26 ಬೆಳಿಗ್ಗೆ 8.00 ಕ್ಕೆ ದೇವತಾ ಪ್ರಾರ್ಥನೆ, ತೋರಣ ಮೂಹೂರ್ತ , ನವಕ ಪ್ರಧಾನ ಹೋಮ, ಕಲಶಾಭಿಷೇಕ, ಅಲಂಕಾರ ಪೂಜೆ, ಧ್ವಜಾರೋಹಣ , ಪ್ರಸಾದ ವಿತರಣೆ, ಅನ್ನಸಂತರ್ಪಣೆ . ಹಾಗೂ ರಾತ್ರಿ ಕುಣಿತ ಭಜನಾ ಕಾರ್ಯಕ್ರಮ.
ಜ.27 ಬೆಳಿಗ್ಗೆ 7.30ರಿಂದ ಆಶ್ಲೇಷ ಬಲಿ, 8.00 ರಿಂದ ಸಾಮೂಹಿಕ ಶ್ರಿ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಗಂಟೆ 12ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ 7 ರಿಂದ ಉತ್ಸವ ಬಲಿ, ಮಹಾಪೂಜೆ, ಶ್ರೀ ಭೂತ ಬಲಿ, ಕವಾಟ ಬಂಧನ, ಪಟ್ಟದ ಪಂಜುರ್ಲಿ ಮತ್ತು ಕಲ್ಕುಡ ದೈವಗಳ ಕೋಲ ,
ಜ.28 ಬೆಳಿಗ್ಗೆ ಕವಾಟ ಉದ್ಘಾಟನೆ, ಕಲಶಾಭಿಷೇಕ, ಅಲಂಕಾರ ಪೂಜೆ, ಬೆಳಿಗ್ಗೆ 11.30 ಕ್ಕೆ ಮಹಾಪೂಜೆ, ಚೂರ್ಣೋತ್ಸವ, ದರ್ಶನ ಬಲಿ , ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಪಲ್ಲ ಪೂಜೆ, ಸಂಜೆ 6ರಿಂದ ಯಾತ್ರಾ ಹೋಮ, ರಾತ್ರಿ ಬಲಿ ಉತ್ಸವ, ಸಿರಿಗಳ ಜಾತ್ರೆ, ಕುಮಾರ ದರ್ಶನ, ಕೊಡಮಣಿತ್ತಾಯ ದೈವದ ನೇಮೋತ್ಸವ, ದೈವದೇವರ ಭೇಟಿ, ಅವಭೃತ ಸ್ನಾನ, ಧ್ವಜಾವರೋಹಣ, ಮಹಾಪೂಜೆ , ಕುಣಿತ ಭಜನಾ ಕಾರ್ಯಕ್ರಮ ನಡೆಯಲಿದೆ.
ಜ.29 ಬೆಳಿಗ್ಗೆ ಗಂಟೆ 8.00 ರಿಂದ ಸಂಪ್ರೋಕ್ಷಣೆ, ಕಲಶಾಭಿಷೇಕ, ಮಂತ್ರಾಕ್ಷತೆಯೊಂದಿಗೆ ಮಂಗಲ ಪ್ರಸಾದ ವಿತರಣೆ ಜರಗಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ತಿಳಿಸಿದ್ದಾರೆ.