23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನಿಸಿ, ಕಂದಾಯ ನಿರೀಕ್ಷಕರನ್ನು ಅವಾಚ್ಯವಾಗಿ ನಿಂದಿಸಿದ ಘಟನೆ ಜ.18ರಂದು ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗದ ಒತ್ತುವರಿಯಾಗಿರುವ ಬಗ್ಗೆ ಪರಿಶೀಲನೆಗಾಗಿ ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ, ಕಂದಾಯ ನಿರೀಕ್ಷಕರು, ಗ್ರಾಮ ಅಭಿವೃದ್ಧಿ ಅಧಿಕಾರಿಯವರೊಂದಿಗೆ ಸದ್ರಿ ಜಾಗಕ್ಕೆ ಸರಕಾರಿ ವಾಹನದಲ್ಲಿ ತೆರಳಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಸದ್ರಿ ಸ್ಥಳವನ್ನು ಒತ್ತುವರಿಸಿದ ನಸೀ‌ರ್ ಮತ್ತು ರೌಫ್ ಎಂಬವರು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಅಲ್ಲದೆ ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕ ಪ್ರತೀಶ್‌ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಜ.19 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಐಪಿಸಿ 353, 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

Related posts

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಪದ್ಮುಂಜ ಸರಕಾರಿ ಪ. ಪೂ. ಕಾಲೇಜಿಗೆ ಶೇ. 86.04 ಫಲಿತಾಂಶ

Suddi Udaya

ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya
error: Content is protected !!