ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya

ಬೆಳಾಲು: ಕರ್ನಾಟಕ ಗಮಕ ಪರಿಷತ್ ಬೆಂಗಳೂರು, ಗಮಕ ಕಲಾ ಪರಿಷತ್‌ ದ.ಕ.ಜಿಲ್ಲೆ, ಗಮಕ ಕಲಾ ಪರಿಷತ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ಬೆಳಾಲು ಶ್ರೀ ಧ.ಮ.ಪ್ರೌಢ ಶಾಲೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಬೆಳಾಲು ಶ್ರೀ ಧ.ಮ.ಪ್ರೌಢ ಶಾಲೆಯಲ್ಲಿ ಜ.20 ರಂದು ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ ಜರಗಿತು.

ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನದ ಅಧ್ಯಕ್ಷತೆಯನ್ನು ಜಯರಾಮ ಕುದ್ರೆತ್ತಾಯ ವಹಿಸಿದ್ದರು. ಶ್ರೀ ಧ.ಮಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಎಸ್.ಸತೀಶ್ಚಂದ್ರ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್‌ ಗೌಡ, ಜಿಲ್ಲಾ ಸಾಹಿತ್ಯ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್, ಧರ್ಮಸ್ಥಳದ ಬಿ.ಭುಜಬಲಿ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಭಾಗವಹಿಸಿದ್ದರು.

ಗಮಕ ಪರಿಷತ್‌ ಜಿಲ್ಲಾ ಅಧ್ಯಕ್ಷ ಮಧೂರು ಮೋಹನ್ ರಾವ್, ತಾಲೂಕು ಅಧ್ಯಕ್ಷ ರಾಮಕೃಷ್ಣ ಭಟ್ ಉಜಿರೆ, ಶ್ರೀ ಧ.ಮ.ಪ್ರೌಢ .ಶಾಲೆ ಎಸ್.ಡಿ.ಎಂ.ಸಿ ಅಧ್ಯಕ್ಷ ಶೇಖರ ಗೌಡ ಕೊಲ್ಲಿಮಾರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕನಿಕ್ಕಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗಮಕದಲ್ಲಿ ಸಾಧನೆ ಮಾಡಿದ ಮನೋರಮ, ಲಕ್ಶ್ಮಣ ಗೌಡ ರವರನ್ನು ಸನ್ಮಾನಿಸಲಾಯಿತು,

ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಸ್ವಾಗತಿಸಿ, ಗಮಕ ಕಲಾ ಪರಿಷತ್ ತಾಲೂಕು ಕಾರ್ಯದರ್ಶಿ ಮೇಧಾ ನಿರೂಪಿಸಿದರು.

Leave a Comment

error: Content is protected !!