24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

ನಡ: ಸುಮಾರು 23 ವರ್ಷಗಳಿಂದ ನಡ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿ ಇವರ ಬೀಳ್ಕೊಡುಗೆ ಸಮಾರಂಭವನ್ನು ಅಂಗನವಾಡಿ ಬಾಲವಿಕಾಸ ಸಮಿತಿ, ಪೋಷಕರು, ಸತ್ಯಶ್ರೀ ಮತ್ತು ನವೋದಯ ಸ್ತ್ರೀ ಶಕ್ತಿ ಸಂಘ, ಹಳೆ ವಿದ್ಯಾರ್ಥಿಗಳ ಸಂಘ, ಆರೋಗ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ನಡ ಇದರ ವತಿಯಿಂದ ಗ್ರಾಮ ಪಂಚಾಯತ್ ನಡ ಸಮಾಜ ಮಂದಿರದಲ್ಲಿ ಸಂಭ್ರಮದಿಂದ ನಡೆಸಲಾಯಿತು.

ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಕಾರ್ಯಕ್ರಮದಲ್ಲಿ ರಾಜೀವಿಯವರಿಗೆ ಸನ್ಮಾನಿಸಲಾಯಿತು. ಅಂಗನವಾಡಿ ಕೇಂದ್ರಕ್ಕೆ 10 ಲೀ. ಕುಕ್ಕರ್ ಮತ್ತು ಫ್ಯಾನ್ ಕೊಡುಗೆಯಾಗಿ ನೀಡಲಾಯಿತು. ಸುಮಾರು 2 ವರ್ಷಗಳಿಂದ ನಡ ಅಂಗನವಾಡಿ ಕೇಂದ್ರಕ್ಕೆ ಉಚಿತವಾಗಿ ತರಕಾರಿಯನ್ನು ಒದಗಿಸಿಕೊಡುತ್ತಿದ್ದ ವಲೇರಿಯನ್ ವೇಗಸ್ ಗುರಿಕಂಡ ಇವರನ್ನು ಗುರುತಿಸಿ ಅಂಗನವಾಡಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ. ಪಂ ಸದಸ್ಯರು, ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ನಡ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಧರಣೇಂದ್ರ ಜೈನ್ ನಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೀನಾಕ್ಷಿ.ಕೆ ಬಂಡಾರಿಕೋಡಿ ಕಾರ್ಯಕ್ರಮ ನಿರೂಪಿಸಿದರು, ವಸಂತ ವಿ ಜಿ ಕೂಲ್ ನಡ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 77ನೇ ಹುಟ್ಟುಹಬ್ಬ ಆಚರಣೆ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya
error: Content is protected !!