
ಬಂದಾರು : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಪೆಲತ್ತಿಮಾರು-ಬಂದಾರು, ಹಾಗೂ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು -ಬಂದಾರು ಇದರ ಸಹಯೋಗದಲ್ಲಿ ಅಯೋಧ್ಯೆ ಪ್ರಭು ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ಶ್ರೀರಾಮ ಮಂದಿರ ಲೋಕಾರ್ಪಣೆ ಸಂಭ್ರಮದ ಸಲುವಾಗಿ ಶ್ರೀ ಕ್ಷೇತ್ರದಲ್ಲಿ ವಿವಿಧ ಸ್ಥಳೀಯ ಭಜನಾ ಮಂಡಳಿಗಳಿಂದ ಭಜನಾ ಸೇವೆ, ರಾಮತಾರಕ ಮಂತ್ರ ಜಪ, ದೇವರಿಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು.






