24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

ಬೆಳ್ತಂಗಡಿ: ಕುತ್ತಾರಿನ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿ ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ವ್ಯಕ್ತಿ ಕೆಳಗೆ ಬಿದ್ದು ಮೃತಪಟ್ಟ ದುರ್ಘಟನೆ ಉಳ್ಳಾಲದಲ್ಲಿ ನಡೆದಿದೆ.

ವಿಶ್ವಾಂಬರನ್ (58ವ) ಮೃತಪಟ್ಟ ವ್ಯಕ್ತಿ. ಇವರು ಕೊಣಾಜೆ ಮೂರ್ತೆದಾರರ ಸಂಘದ ಮಾಜಿ ನಿರ್ದೇಶಕರಾಗಿದ್ದರು.

ಮುಂಜಾನೆ ಮನೆಯ ಸಮೀಪದ ಮರದಿಂದ ಶೇಂದಿ ತೆಗೆಯಲು ಮರ ಹತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಮೂಲತ: ಧರ್ಮಸ್ಥಳ ಪುದುವೆಟ್ಟು ನಿವಾಸಿಯಾಗಿದ್ದ ಮೃತರು ಸದ್ಯ ಸಂತೋಷ ನಗರ ಕುಟುಂಬ ಸಮೇತರಾಗಿ ನೆಲೆಸಿದ್ದಾರೆ. ಕುತ್ತಾರಿಗೆ ಬಂದು ನೆಲೆಸಿರುವ ಇವರು ಶೇಂದಿ ತೆಗೆಯುವ ಗುತ್ತಿಗೆ ವಹಿಸಿಕೊಂಡಿದ್ದರು.

ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Related posts

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya
error: Content is protected !!