September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

ಬೆಳ್ತಂಗಡಿ: ಕುತ್ತಾರಿನ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿ ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ವ್ಯಕ್ತಿ ಕೆಳಗೆ ಬಿದ್ದು ಮೃತಪಟ್ಟ ದುರ್ಘಟನೆ ಉಳ್ಳಾಲದಲ್ಲಿ ನಡೆದಿದೆ.

ವಿಶ್ವಾಂಬರನ್ (58ವ) ಮೃತಪಟ್ಟ ವ್ಯಕ್ತಿ. ಇವರು ಕೊಣಾಜೆ ಮೂರ್ತೆದಾರರ ಸಂಘದ ಮಾಜಿ ನಿರ್ದೇಶಕರಾಗಿದ್ದರು.

ಮುಂಜಾನೆ ಮನೆಯ ಸಮೀಪದ ಮರದಿಂದ ಶೇಂದಿ ತೆಗೆಯಲು ಮರ ಹತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಮೂಲತ: ಧರ್ಮಸ್ಥಳ ಪುದುವೆಟ್ಟು ನಿವಾಸಿಯಾಗಿದ್ದ ಮೃತರು ಸದ್ಯ ಸಂತೋಷ ನಗರ ಕುಟುಂಬ ಸಮೇತರಾಗಿ ನೆಲೆಸಿದ್ದಾರೆ. ಕುತ್ತಾರಿಗೆ ಬಂದು ನೆಲೆಸಿರುವ ಇವರು ಶೇಂದಿ ತೆಗೆಯುವ ಗುತ್ತಿಗೆ ವಹಿಸಿಕೊಂಡಿದ್ದರು.

ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Related posts

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ

Suddi Udaya

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya
error: Content is protected !!