ಮಚ್ಚಿನ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಬಳ್ಳಮಂಜ, ವೀರ ಕೇಸರಿ ಫ್ರೆಂಡ್ಸ್ ಬಳ್ಳಮಂಜ , ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇವುಗಳ ಜಂಟಿ ಆಶ್ರಯದಲ್ಲಿ ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠಾಪನೆಯ ಅಂಗವಾಗಿ ಬೆಳಿಗ್ಗೆ ದೇವತಾ ಪ್ರಾರ್ಥನೆಯ ಬಳಿಕ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡು ಬೆಳಿಗ್ಗೆ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಿಂದ ತೆರೆದ ವಾಹನದಲ್ಲಿ ರಾಮ ದೇವರ ಭಾವಚಿತ್ರ ಇರಿಸಿ ರಾಮ ಸಂಕೀರ್ತನ ಯಾತ್ರೆ ಭಜನೆಯ ಮೂಲಕ ಬಳ್ಳಮಂಜ ಪೇಟೆಯಾಗಿ ಪುನಃ ದೇವಸ್ಥಾನದಲ್ಲಿ ಸಮಾಪ್ತಿಗೊಂಡಿತು.
ಬಳ್ಳಮಂಜ ಪೇಟೆಯಲ್ಲಿ ರಾಮ ಸಂಕೀರ್ತನ ಯಾತ್ರೆಯಲ್ಲಿ ಪಾಲ್ಗೊಂಡಿರುವವರಿಗೆ ಪಾನಕ ವ್ಯವಸ್ಥೆಯಿತ್ತು ಹಾಗೂ ಅಯೋಧ್ಯೆಯ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಯ ನೇರಪ್ರಸಾರವನ್ನು ಎಲ್ಇಡಿ ಪರದೆಯ ಮೂಲಕ ತೋರಿಸಲಾಯಿತು. ಮಧ್ಯಾಹ್ನ ಮಹಾ ಪೂಜೆಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಿತು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗವಹಿಸಿದ್ದರು. ದೇವಳದ ಅನುವಂಶಿಕ ಆಡಳಿತ ಮೊಕ್ತೇಸರರು ಹರ್ಷ ಸಂಪಿಗೆತ್ತಾಯ ಭಾಗವಹಿಸಿದ್ದರು. ಸಂಜೆ ರಾಮ ದೀಪೋತ್ಸವ ಹಾಗೂ ಸುಡುಮದ್ದು ಪ್ರದರ್ಶನ ಬಹಳ ವಿಜೃಂಭಣೆಯಿಂದ ನಡೆಯಿತು. ಮಾತೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಜಯಪ್ರಕಾಶ್ ಸಂಪಿಗೆತ್ತಾಯ , ಮಚ್ಚಿನ ಕೃ.ಪ.ಸ.ಸಂಘದ ಅಧ್ಯಕ್ಷ ಪದ್ಮಾನಾಭ, ಗ್ರಾ.ಪಂ. ಸದಸ್ಯರಾದ ಚಂದ್ರಶೇಖರ್ ಬಿ.ಎಸ್, ವಿಶ್ವ ಹಿಂದೂ ಭಜರಂಗದಳದ ಪ್ರಮುಖರಾದ ಸತೀಶ್ ಮರಕಡ, ವೀರಕೇಸರಿ ಫ್ರೇಂಡ್ಸ್ ಅಧ್ಯಕ್ಷ ಅಶೋಕ್, ನ್ಯೂ ಫ್ರೇಂಡ್ಸ್ ಕ್ಲಬ್ ನ ಅಧ್ಯಕ್ಷ ಪ್ರೇಮನಾಥ ಗೌಡ ಮೊದಲಾದವರು ಉಪಸ್ಥಿತರಿದ್ದರು.