38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದ ವಿಶ್ವಜ್ಯೋತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಉಪ್ಪಾರಪಳಿಕೆ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಡಾ. ತಾರಾ ರವರು ಮಹಿಳೆ ಕುಟುಂಬದ ಶಕ್ತಿ ಎಲ್ಲರ ಬದುಕಿನಲ್ಲಿ ಮಹಿಳೆ ಪ್ರಮುಖ ಸ್ಥಾನ ಪಡೆದಿದ್ದಾಳೆ. ಮಾತೃಶ್ರೀ ಹೇಮಾವತಿ ಅಮ್ಮನವರು ಮಹಿಳೆಯರ ಅಭಿವೃದ್ಧಿಗಾಗಿ ಪ್ರಾರಂಭಿಸಿದ ಜ್ಞಾನ ವಿಕಾಸ ಕೇಂದ್ರದ ಮೂಲಕ ಬಹಳಷ್ಟು ಮಾಹಿತಿಯನ್ನು ಪಡೆದುಕೊಂಡು ಪ್ರಬುದ್ಧರಾಗಲು ಸಾಧ್ಯವಾಗಿದೆ ಎಂದರು. ಶಾಲೆಯ ಮುಖ್ಯೋಪಾಧ್ಯಾಯರಾದ ಸರಸ್ವತಿ ಗ್ರಾಮಾಭಿವೃದ್ಧಿ ಯೋಜನೆಯ ಯಾವುದೇ ಕಾರ್ಯಕ್ರಮಗಳು ಉತ್ತಮ ರೀತಿ ನಡೆಯುತ್ತಿದೆ. ಜ್ಞಾನವಿಕಾಸ ಕೇಂದ್ರವು ಪ್ರತಿಭೆಗಳನ್ನು ಹೊರ ಹಾಕಲು ಮಹಿಳೆಯರಿಗೆ ಒಂದು ಉತ್ತಮ ವೇದಿಕೆಯಾಗಿದೆ. ಮಾತೃಶ್ರೀ ಹೇಮಾವತಿ ಅಮ್ಮನವರು ಹಮ್ಮಿಕೊಂಡ ಈ ಜ್ಞಾನ ವಿಕಾಸ ಕಾರ್ಯಕ್ರಮದಿಂದ ಅದೆಷ್ಟು ಮಹಿಳೆಯರಿಗೆ ವಿವಿಧ ಮಾಹಿತಿಗಳನ್ನು ಪಡೆಯಲು ಅವಕಾಶ ಸಿಕ್ಕಿದೆ. ಮಹಿಳೆಯರು ಕುಟುಂಬದ ಸದಸ್ಯರ ಅಭಿವೃದ್ಧಿಯೊಂದಿಗೆ ತಮ್ಮ ಆರೋಗ್ಯದ ಕಡೆ ಗಮನವನ್ನು ಕೊಡಬೇಕು ಎಂದರು.

ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿ ಸುರೇಂದ್ರರವರು ಜ್ಞಾನ ವಿಕಾಸ ಕಾರ್ಯಕ್ರಮದ ಧ್ಯೇಯೋದ್ದೇಶಗಳ ಬಗ್ಗೆ ತಿಳಿಸುತ್ತಾ ಉತ್ತಮ ಹಾಜರಾತಿಯೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ವಲಯಾಧ್ಯಕ್ಷರು ಅಧ್ಯಕ್ಷರು ಮೇಲ್ವಿಚಾರಕರಾದ ಭಾಗೀರಥಿ, ಜ್ಞಾನವಿಕಾಸ ಸಮನ್ವಯಧಿಕಾರಿಮಧುರಾರವರು ಸೇವಾಪ್ರತಿನಿಧಿ ರೋಹಿಣಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನ ವಿಕಾಸ ಕೇಂದ್ರದ ಸದಸ್ಯರಾದ ಶ್ರೀಮತಿ ಪದ್ಮಾವತಿಯವರು ವಹಿಸಿದ್ದರು.

ಕಾರ್ಯಕ್ರಮವನ್ನು ಕುಸುಮರವರು ನಿರೂಪಿಸಿ, ಭವಾನಿ ಸ್ವಾಗತಿಸಿ, ಯಮುನಾ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.

Related posts

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

Suddi Udaya

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya
error: Content is protected !!