ಪಟ್ರಮೆ : ಅಯೋಧ್ಯೆಯಲ್ಲಿ ರಾಮಲಲ್ಲನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಸಂಭ್ರಮಾಚರಣೆಯನ್ನು ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಆಚರಿಸಲಾಯಿತು.
ಬೆಳಿಗ್ಗೆ ಅಗ್ನಿಹೋತ್ರ, ಸರಸ್ವತಿ ವಂದನೆಯ ಬಳಿಕ ಶಾಲಾ ಮೈದಾನದಲ್ಲಿ ಮಕ್ಕಳು ನೃತ್ಯ ಭಜನೆ ಮಾಡುವುದರ ಮೂಲಕ ಸಂಭ್ರಮಿಸಿದರು. ಬಳಿಕ ವೇದವ್ಯಾಸ ಧ್ಯಾನ ಮಂದಿರದಲ್ಲಿ 108 ಬಾರಿ ರಾಮ ತಾರಕ ಮಂತ್ರ, ರಾಮರಕ್ಷಾ ಸ್ತೋತ್ರ, ಹನುಮಾನ್ ಚಾಲೀಸ್ ಪಠಿಸಿದರು. ಅಯೋಧ್ಯೆಯ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ನೇರ ಪ್ರಸಾರವನ್ನು ವಿದ್ಯಾರ್ಥಿಗಳಿಗೆ ಪರದೆಯ ಮೂಲಕ ವೀಕ್ಷಿಸಲು ವ್ಯವಸ್ಥೆಗೊಳಿಸಲಾಗಿತ್ತು.
ಶಾಲಾ ಆಡಳಿತ ಸಮಿತಿ ಸಂಚಾಲಕ ಪ್ರಶಾಂತ್ ಶೆಟ್ಟಿ ದೇರಾಜೆ, ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಕೇಸರಿ ಶಾಲಿನೊಂದಿಗೆ ಶಾಲೆಗೆ ಆಗಮಿಸಿದ್ದು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತು. ಸಾಂಪ್ರದಾಯಿಕ ಸಿಹಿ ಭೋಜನದೊಂದಿಗೆ ಕಾರ್ಯಕ್ರಮ ಪೂರ್ಣಗೊಂಡಿತು. ರಾತ್ರಿ ಶಾಲೆಯ ಸುತ್ತಲೂ ಹಣತೆ ಹಚ್ಚಿ ದೀಪಾವಳಿಯಂತೆ ಸಂಭ್ರಮಿಸಿದರು.