September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

ಪಟ್ರಮೆ : ಅಯೋಧ್ಯೆಯಲ್ಲಿ ರಾಮಲಲ್ಲನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಸಂಭ್ರಮಾಚರಣೆಯನ್ನು ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಆಚರಿಸಲಾಯಿತು.


ಬೆಳಿಗ್ಗೆ ಅಗ್ನಿಹೋತ್ರ, ಸರಸ್ವತಿ ವಂದನೆಯ ಬಳಿಕ ಶಾಲಾ ಮೈದಾನದಲ್ಲಿ ಮಕ್ಕಳು ನೃತ್ಯ ಭಜನೆ ಮಾಡುವುದರ ಮೂಲಕ ಸಂಭ್ರಮಿಸಿದರು. ಬಳಿಕ ವೇದವ್ಯಾಸ ಧ್ಯಾನ ಮಂದಿರದಲ್ಲಿ 108 ಬಾರಿ ರಾಮ ತಾರಕ ಮಂತ್ರ, ರಾಮರಕ್ಷಾ ಸ್ತೋತ್ರ, ಹನುಮಾನ್ ಚಾಲೀಸ್ ಪಠಿಸಿದರು. ಅಯೋಧ್ಯೆಯ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ನೇರ ಪ್ರಸಾರವನ್ನು ವಿದ್ಯಾರ್ಥಿಗಳಿಗೆ ಪರದೆಯ ಮೂಲಕ ವೀಕ್ಷಿಸಲು ವ್ಯವಸ್ಥೆಗೊಳಿಸಲಾಗಿತ್ತು.


ಶಾಲಾ ಆಡಳಿತ ಸಮಿತಿ ಸಂಚಾಲಕ ಪ್ರಶಾಂತ್ ಶೆಟ್ಟಿ ದೇರಾಜೆ, ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಕೇಸರಿ ಶಾಲಿನೊಂದಿಗೆ ಶಾಲೆಗೆ ಆಗಮಿಸಿದ್ದು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತು. ಸಾಂಪ್ರದಾಯಿಕ ಸಿಹಿ ಭೋಜನದೊಂದಿಗೆ ಕಾರ್ಯಕ್ರಮ ಪೂರ್ಣಗೊಂಡಿತು. ರಾತ್ರಿ ಶಾಲೆಯ ಸುತ್ತಲೂ ಹಣತೆ ಹಚ್ಚಿ ದೀಪಾವಳಿಯಂತೆ‌ ಸಂಭ್ರಮಿಸಿದರು.

Related posts

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

Suddi Udaya

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya
error: Content is protected !!