32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

ನಾರಾವಿ: ಅಯೋಧ್ಯೆಯ ಭವ್ಯ ದಿವ್ಯ ಶ್ರೀರಾಮ ಮಂದಿರದ ಉದ್ಘಾಟನೆ ಮತ್ತು ರಘುಕುಲ ತಿಲಕ ಪ್ರಭು ಶ್ರೀರಾಮಲಲ್ಲಾನ ನೂತನ ವಿಗ್ರಹದ ಪ್ರಾಣ ಪ್ರತಿಷ್ಠೆಯ ಅಂಗವಾಗಿ ನಾರಾವಿಯ ಸಮಸ್ತ ಹಿಂದೂ ಸಂಘಟಕರ ವತಿಯಿಂದ ಹಾಗೂ ರಾಮ ಭಕ್ತರ ಸಹಕಾರದಿಂದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ ಕಾರ್ಯಕ್ರಮವು ಭಾರೀ ಜನಸ್ತೋಮದೊಂದಿಗೆ ಬಹಳ ವಿಜೃಂಭಣೆಯಿಂದ ಜ.22ರಂದು ನೆರವೇರಿತು.

ಬೆಳಿಗ್ಗೆ ಸಾಮೂಹಿಕ ವಿಷ್ಣು ಸಹಸ್ರನಾಮ,ರಾಮ ರಕ್ಷಾ ಸ್ತೋತ್ರ,ಹನುಮಾನ್ ಚಾಲೀಸ ಪಠಣದೊಂದಿಗೆ ಶ್ರೀ ರಾಮೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ರಾಮ ಭಕ್ತರಿಂದ ವಿಶೇಷ ಭಜನಾ ಸಂಕೀರ್ತನೆ, ಕುಣಿತ ಭಜನೆ ನಡೆಯಿತು. ಸೂರ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಕೃಷ್ಣ ತಂತ್ರಿಯವರ ನೇತೃತ್ವದಲ್ಲಿ ಶ್ರೀ ರಾಮ ತಾರಕ ಮಂತ್ರ ಜಪ ಯಜ್ಞ ಆಯೋಜಿಸಲಾಗಿತ್ತು. ಮಧ್ಯಾಹ್ನ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮ ದೇವರು ಪ್ರಾಣ ಪ್ರತಿಷ್ಠಾಪನೆಯೊಂದಿಗೆ ವಿರಾಜಮಾನರಾದ ಮೇಲೆ ರಾಮ ಭಕ್ತಾದಿಗಳು ದೇವಸ್ಥಾನದ ಒಳಾಂಗಣ ಮತ್ತು ಹೊರಾಂಗಣದಲ್ಲಿ ಸಾವಿರಾರು ಹಣತೆಗಳಲ್ಲಿ ದೀಪ ಬೆಳಗಿಸಿ ಪ್ರಭು ಶ್ರೀರಾಮ ದೇವರಿಗೆ ಗೌರವಾರ್ಪಣೆ ಸಲ್ಲಿಸಿದರು.

ನಂತರ ಶ್ರೀ ಸೂರ್ಯನಾರಾಯಣ ದೇವರ ವಿಶೇಷ ಹೂವಿನ ಪೂಜೆ ಮಹಾ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ದೇವರ ಗಂಧಪ್ರಸಾದವನ್ನು ಸ್ವೀಕರಿಸಿ ಕೃತಾರ್ಥರಾದರು.

ವಿಶೇಷವಾಗಿ ಅಂದಿನ ಕಾರ್ಯಕ್ರಮದಲ್ಲಿ 1992ರ ಅಯೋಧ್ಯಾ ಕರಸೇವೆಯಲ್ಲಿ ಪಾಲ್ಗೊಂಡ ಕರಸೇವಕರಾದ ನಾರಾವಿಯ ಗಣೇಶ್ ಹೆಗ್ಡೆ ಅರಸಕಟ್ಟೆ ಮತ್ತು ಕುತ್ಲೂರಿನ ರವೀಶ್ ಇವರುಗಳನ್ನು ನಾರಾವಿಯ ಸಮಸ್ತ ಹಿಂದೂ ಸಂಘಟಕರ ಪರವಾಗಿ ರಾಮ ಭಕ್ತರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಗಣೇಶ್ ಹೆಗ್ಡೆಯವರು ಗೌರವಾರ್ಪಣೆಯನ್ನು ಸ್ವೀಕರಿಸಿ ಅಂದಿನ ಕರಸೇವೆಯ ಕರಾಳ ಅನುಭವದ ಕಥಾನಕವನ್ನು ಸಭೆಗೆ ಸಂಕ್ಷಿಪ್ತವಾಗಿ ವಿವರಿಸಿದರು. ರತ್ನಾಕರ್ ಭಟ್ ಹೊಳೆಹೊದ್ದು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ಸಾವಿರಾರು ರಾಮ ಭಕ್ತರು ಉಪಸ್ಥಿತರಿದ್ದರು.

ಬೆಳಗಿನಿಂದ ಸಂಜೆಯ ತನಕ ದೇವಸ್ಥಾನದ ಆವರಣದಲ್ಲಿ ಆಗಮಿಸಿದ ಭಕ್ತಾದಿಗಳಿಗೆ ಟಿವಿ ಪರದೆಯ ಮೂಲಕ ಅಯೋಧ್ಯೆ ಶ್ರೀರಾಮ ಮಂದಿರದ ಉದ್ಘಾಟನೆ ಮತ್ತು ಶ್ರೀರಾಮ ದೇವರ ನೂತನ ವಿಗ್ರಹದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

Suddi Udaya

ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದ ದುರ್ಘಟನೆ ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಎಂಬವರು ಮೃತ್ಯು

Suddi Udaya

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ

Suddi Udaya
error: Content is protected !!