July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಸರಕಾರಿ ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಇಬ್ಬರು ಹಲ್ಲೆಗೆ ಯತ್ನಿಸಿರುವ ಘಟನೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ‌.

ಮದಡ್ಕದ ನಿವಾಸಿ ನಿಸಾರ್ ಮತ್ತು ಆತನ ಸಹೋದರ ರೌಫ್ ಎಂಬಿಬ್ಬರನ್ನು ಜ.24 ರಂದು(ಇಂದು) ಮಧ್ಯಾಹ್ನ ವಶಕ್ಕೆ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ವಿವರ: ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ರವರು ಜ.18 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗದ ಒತ್ತುವರಿಯಾಗಿರುವ ಬಗ್ಗೆ ಪರಿಶೀಲನೆಗಾಗಿ ಕಂದಾಯ ನಿರೀಕ್ಷಕರು , ಗ್ರಾಮ ಅಭಿವೃದ್ದಿ ಅಧಿಕಾರಿಯವರೊಂದಿಗೆ ಸದ್ರಿ ಜಾಗಕ್ಕೆ ಸರಕಾರಿ ವಾಹನದಲ್ಲಿ ತೆರಳಿ ಪರಿಶೀಲನೆ ನಡೆಸುತ್ತಿದ್ದರು.


ಸದ್ರಿ ಸ್ಥಳವನ್ನು ಒತ್ತುವರಿಸಿದ ನಿಸಾರ್‌ ಮತ್ತು ರೌಫ್‌ ಎಂಬವರುಗಳು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿರುತ್ತಾರೆ ಹಾಗೂ ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕರ ಪ್ರತೀಶ್ ಗೆ ಅವಾಚ್ಯ ಶಬ್ದಗಳಿಂದ ಬೈದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟು ಮಾಡಿದ್ದಾರೆ ಎಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೀಡಿದ ದೂರಿನ ಮೇರೆಗೆ ಜ.19 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ 353, 504 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು‌‌.

Related posts

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Suddi Udaya

ಬೆಳ್ತಂಗಡಿ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು: ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ ಕಾರು

Suddi Udaya

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

Suddi Udaya
error: Content is protected !!