April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ ಕಾರ್ಯಕ್ರಮವು ಜ.24 ರಂದು ನಡೆಯಿತು.

ಹೊರನಾಡು ಶ್ರೀ ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರರಾದ ಭೀಮೇಶ್ವರ ಜೋಶಿ ಶಿಲಾನ್ಯಾಸವನ್ನು ನೆರವೇರಿಸಿ ಶುದ್ದ ಮನಸ್ಸಿನ ಪ್ರಾರ್ಥನೆಯಿಂದ ದೈವ- ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಲಕ್ಷ್ಮೀ ಗ್ರೂಪ್ ಸಂಸ್ಥೆಯ ಮಾಲಕ ಮೋಹನ್ ಕುಮಾರ್, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸಮಂತ್ ಕುಮಾರ್ ಜೈನ್, ಬದ್ಯಾರ್ ಪಂಚಮುಖಿ ಇಂಡಸ್ಟ್ರೀಸ್ ಮಾಲಕ ಬಾಲಕೃಷ್ಣ ಶೆಟ್ಟಿ, ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಸಮಿತಿ ಅಧ್ಯಕ್ಷ ಸಂಪತ್ ಬಿ‌ ಸುವರ್ಣ, ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಟ್ರಸ್ಟಿ ಪಿ ರಾಜೇಂದ್ರ ನಾಯರ್, ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ಸುಕೇಶ್ ಕುಮಾರ್ ಜೈನ್ ,ಪ್ರವೀಣ್ ಕುಮಾರ್ ಅಜ್ರಿ ಪಾಡ್ಯಾರುಬೀಡು, ಜೀರ್ಣೋದ್ಧಾರ ಸಮಿತಿ ಕಾರ್ಯಧ್ಯಕ್ಷ ವಿಶ್ವೇಶ್ ಕಿಣಿ ಉಪಸ್ಥಿತರಿದ್ದರು.

ಪುರೋಹಿತ್ ವಾಸುದೇವ ಭಟ್ ಪ್ರಾರ್ಥಿಸಿದರು. ಆನಂದ ಕೋಟ್ಯಾನ್ ಸ್ವಾಗತಿಸಿದರು. ವಸಂತ ಪೂಜಾರಿ ಗರ್ಡಾಡಿ ನಿರೂಪಿಸಿದರು.

Related posts

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ. 2. 43 ಲಕ್ಷ ನಿವ್ವಳ ಲಾಭ.

Suddi Udaya
error: Content is protected !!