ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ನ್ಯಾಯತರ್ಪು: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ ಹಾಗೂ ನೂತನ ಚಂದ್ರಮಂಡಲ ರಥ ಮತ್ತು ಪಲ್ಲಕ್ಕಿ ಸಮರ್ಪಣಾ ಕಾರ್ಯಕ್ರಮವು ಜ.22ರಿಂದ ಜ.30ರವರೆಗೆ ದೇವಳದ ತಂತ್ರಿಗಳಾದ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯ ಮಾರ್ಗದರ್ಶನದಲ್ಲಿ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿರುವುದು.

ಇಂದು (ಜ.24 ) ಊರವರಿಂದ ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆಯು ನಡೆಯಿತು.

ನಂತರ ಧ್ವಜಾರೋಹಣ, ಮಹಾಪೂಜೆ, ನಿತ್ಯಬಲಿ, ಸಂಜೆ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆಯಲ್ಲಿ ಪೂಜೆ, ಮಹಾಪೂಜೆ-ನಿತ್ಯಬಲಿ, ದೀಪದ ಬಲಿ, ರಾತ್ರಿ ಅಂಗನವಾಡಿ ಕೇಂದ್ರ ಗೋವಿಂದೂರು, ಅಂಗನವಾಡಿ ಕೇಂದ್ರ, ರಕ್ತೇಶ್ವರಿಪದವು, ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕೊರಂಜ, ಸರಕಾರಿ ಪ್ರೌಢಶಾಲೆ ಗೇರುಕಟ್ಟೆ ಹಾಗೂ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಲಿದೆ.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಗೇರುಕಟ್ಟೆ, ಸದಸ್ಯರಾದ ವಸಂತ ಮಜಲು, ಜನಾರ್ಧನ ಪೂಜಾರಿ, ಶ್ರೀಮತಿ ಅಂಬಾ ಬಿ ಆಳ್ವ, ಶ್ರೀಮತಿ ವಿಜಯ ಎಚ್. ಪ್ರಸಾದ್, ಉಮೇಶ್ ಕೆ. ಕೇಲ್ದಡ್ಕ, ರಾಜೇಶ್ ಶೆಟ್ಟಿ ಅಡ್ಡಕೊಡಂಗೆ, ದಿನೇಶ್ ಗೌಡ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾಧವ ಗೌಡ ಮುದ್ದುಂಜ, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಭಜನಾ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿ ಸಂಬೋಳ್ಯ,ಪ್ರದಾನ ಕಾರ್ಯದರ್ಶಿ ಲೋಕೇಶ್ ಕುಮಾರ್ ಎನ್, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷರು, ಸದಸ್ಯರು, ದೇವಸ್ಥಾನದ ಪ್ರಬಂಧಕರು, ಜಾತ್ರಾ ಮಹೋತ್ಸವದ ವಿವಿಧ ಸಮಿತಿ ಪದಾಧಿಕಾರಿಗಳು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ದ್ವಿಚಕ್ರ ವಾಹನ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಂದ ಉಚಿತ ಪುಸ್ತಕ ವಿತರಣೆ

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya
error: Content is protected !!