April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜ.23 ರಂದು ಪ್ರಕರಣ ದಾಖಲಾಗಿದೆ.

ಸಂತ್ರಸ್ಥ ಮಹಿಳೆಯ ದೂರಿನಂತೆ, ಜ.23 ರಂದು ರಾತ್ರಿ, ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿರುವ ಮಹಿಳೆಯ ಪತಿ ಮನೆಯಲ್ಲಿದ್ದಾಗ, ಆರೋಪಿ ಉಮೇಶ ಗೌಡರವರು ಮನೆಯೊಳಗಡೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಈ ವೇಳೆ ತಡೆದ ಮಹಿಳೆಯ ಪತಿ, ಉಮೇಶ ಗೌಡ ಈತನ ಕಡೆಯವರಾದ ಹೋಮ್ ಸ್ಟೇ ಮಹೇಶ್, ರತೀಶ, ಅಶೋಕ, ಗಣೇಶ, ರವಿ, ಲೋಕಪ್ಪ ಗೌಡ ಮತ್ತು ಶಾಂತಪ್ಪ ಗೌಡ ಎಂಬವರುಗಳು ಹಲ್ಲೆ ನಡೆಸಿರುತ್ತಾರೆ. ಬಳಿಕ ಅವಾಚ್ಯ ಶಬ್ಧಗಳಿಂದ ಬೈದು, ಅವಮಾನಪಡಿಸಿ, ಕೊಲೆ ಬೆದರಿಕೆ ಹಾಕಿ ಹೊರಟು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ,‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 07/2024 ಕಲಂ: 143,147,148,447,354(ಎ),323, 504,506, ಜೊತೆಗೆ 149 ಐಪಿಸಿ ಕಲಂ: 3(2)(v)(a),3(1)(w)(1) SC/ST ACT 2015 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಯುವನಿಧಿ ನೊಂದಣಿ ಶಿಬಿರ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya
error: Content is protected !!