23.3 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

ಉಜಿರೆ: ಮಕ್ಕಳಲ್ಲಿ ಉತ್ತಮ ಚಾರಿತ್ರ್ಯ ಮತ್ತು ವ್ಯಕ್ತಿತ್ವ ರೂಪಿಸಲು ಸಕಾಲದಲ್ಲಿ ಮಾರ್ಗದರ್ಶನ ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ ಪೋಷಿಸಿದಾಗ ಮಾತ್ರ ಮಕ್ಕಳು ಸರ್ವತೋಮುಖವಾಗಿ ವಿಕಾಸ ಹೊಂದಲು ಸಾಧ್ಯ ಎನ್ನುತ್ತಾ ವಿಶ್ವ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣುಮಕ್ಕಳನ್ನು ಓದಿಸಿ ಎಂಬುದರ ಕುರಿತಾಗಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮುಖ್ಯ ಅತಿಥಿಗಳಾದ ಬೆಳ್ತಂಗಡಿ ಶಿಶು ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪ್ರಿಯಾ ಆಗ್ನೇಸ್, ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್), ದ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಶಿಕ್ಷಣಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ, ಉಜಿರೆಯ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್ ಇವರು ಮಕ್ಕಳಿಗೆ ಸೋಲಿನ ಭಯದಿಂದ ಮತ್ತು ಹತಾಶ ಭಾವನೆಯಿಂದ ಹೊರಬರುವಂತೆ ನಿರಂತರ ಮಕ್ಕಳ ಸಮಸ್ಯೆಗಳಿಗೆ ಸ್ಪಂದಿಸುವುದು ಅಗತ್ಯ ಎಂದು ಅಧ್ಯಕ್ಷೀಯ ನುಡಿಗಳನ್ನಾಡಿದರು.
ಎಸ್.ಡಿ.ಎಂ. ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ವಾರ್ಷಿಕ ಚಟುವಟಿಕೆಗಳ ವರದಿ ವಾಚಿಸಿದರು. 2019-21 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯವು ನಡೆಸಿದ ಬಿ.ಎಡ್. ವಾರ್ಷಿಕ ಪರೀಕ್ಷೆಯಲ್ಲಿ ತೃತಿಯ ಹಾಗೂ ಚತುರ್ಥ ರ್‍ಯಾಂಕ್ ವಿಜೇತರಾದ ಸುನೀತ ಎ ಎಸ್. ಹಾಗೂ ಪೂಜಶ್ರೀ ಇವರನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು. ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.


ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಸೋಮಶೇಖರ್ ಶೆಟ್ಟಿ ಬಿ., ಡಿ.ಎಡ್. ಕಾಲೇಜಿನ ಪ್ರಾಂಶುಪಾಲರಾದ ಸ್ವಾಮಿ ಕೆ ಎ, ರತ್ನಮಾನಸದ ನಿಲಯಪಾಲಕರಾದ ಯತೀಶ್ ಕೆ ಬಳಂಜ, ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ವಿದ್ಯಾಶ್ರೀ ಪಿ, ತಿರುಮಲೇಶ್ ರಾವ್ ಎನ್ ಕೆ, ಹರೀಶ್ ಕುಮಾರ್, ಮಂಜು ಆರ್, ಶ್ರೀಮತಿ ಅನುಷಾ ಡಿ ಜೆ ಹಾಗೂ ಬೋಧಕೇತರ ಸಿಬ್ಬಂದಿ ಮೊದಲಾದವರು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಪ್ರಶಿಕ್ಷಣಾರ್ಥಿ ಸಾರ್ಥಕ್ ಜೈನ್ ಸ್ವಾಗತಿಸಿ, ಕೀರ್ತನ್ ಕುಮಾರ್ ವಂದಿಸಿ, ಪೂಜಶ್ರೀ ಹಾಗೂ ಬ್ಲೆಸ್ಸಿ ಸೆಬಾಸ್ಟಿಯನ್ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ವೇಣೂರು- ಶ್ರೀ ಶಾರದಾ ಸೇವಾ ಟ್ರಸ್ಟ್ ,ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು,ಲಯನ್ಸ್ ಕ್ಲಬ್ (ರಿ)ವೇಣೂರು,ಹಾಗು ಪದ್ಮಾಂಬ ಕ್ಯಾಟರ್ಸ್ ಅಳದಂಗಡಿ ಇವರ ಸಹಭಾಗಿತ್ವದಲ್ಲಿ ದೀಪಾವಳಿ* ಪ್ರಯುಕ್ತ ದೋಸೆ ಹಬ್ಬ,ಗೂಡುದೀಪ ಹಾಗು ರಂಗೋಲಿ ಸ್ಪರ್ಧೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

Suddi Udaya
error: Content is protected !!